ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ: ಯತ್ನಾಳ್, ಜಯ ಮೃತ್ಯುಂಜಯ ಸ್ವಾಮೀಜಿ ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿಯಲ್ಲಿ ನಡೆಯುತ್ತಿರುವ ಪಂಚಮಸಾಲಿ ಹೋರಾಟ ವಿಕೋಪಕ್ಕೆ ತಿರುಗಿದೆ. ಜೈ ಪಂಚಮಸಾಲಿ ಎನ್ನುತ್ತಾ ಸಾವಿರಾರು ಹೋರಾಟಗಾರರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ನುಗ್ಗಿದರು.

ಪ್ರತಿಭಟನೆಕಾರರು ಬ್ಯಾರಿಕೇಡ್​ಗಳನ್ನು ಕಿತ್ತೆಸೆದು ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದ್ದಾರೆ. ಹೀಗಾಗಿ ಪೊಲೀಸರು ಲಾಠಿಚಾರ್ಜ್​​ ಮಾಡಿದ್ದಾರೆ.

ಪರಿಸ್ಥಿತಿ ಕೈಮೀರುತ್ತಿದ್ದಂತೆಯೇ ಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ಸೇರಿದಂತೆ ಹಲವರನ್ನ ಪೋಲಿಸರ ವಶಕ್ಕೆ ಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!