Sunday, December 3, 2023

Latest Posts

ಹಿರಿಯ ನಟ ದೊಡ್ಡಣ್ಣಗೆ ಒಲಿದ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉಡುಪಿ ಜಿಲ್ಲೆಯ ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಸದ್ಭಾವನಾ 2023 ನಾಡುನುಡಿಗೆ ಭಾವನಮನ ಎಂಬ ಶೀರ್ಷಿಕೆಯಡಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು ಇದೇ ನ. 10 ರ ಶುಕ್ರವಾರ ಸಂಜೆ ೬ಕ್ಕೆ ಕೋಟದ ಗಾಂಧಿ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಪ್ರತಿವರ್ಷ ರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಸಾಧಕರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದು ಈ ಬಾರಿ ಕನ್ನಡ ಚಿತ್ರರಂಗದ ಶ್ರೇಷ್ಠ ನಟ ಎಸ್.ದೊಡ್ಡಣ ರವರಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದೆ. ಪ್ರಶಸ್ತಿ ಬೆಳ್ಳಿ ಫಲಕ ಒಳಗೊಂಡಿದೆ.

ಇದೇ ವೇಳೆ ವಿಶೇಷ ಅಭಿನಂದನೆಯನ್ನು ಅಮ್ಮಚ್ಚಿ ಎಂಬ ನೆನಪು ಚಿತ್ರದ ನಾಯಕ ರಂಗನಟ ಡಾ.ರಾಧಕೃಷ್ಣ ಉರಾಳ ಇವರಿಗೆ ನೀಡಲಿದ್ದು, ವಿಶೇಷ ಪುರಸ್ಕಾರವನ್ನು ಪರಿಸರಸ್ನೇಹಿ ಸಂಘಟನೆ ಕ್ಲೀನ್ ತ್ರಾಸಿ ಮರವಂತೆ ತಂಡಕ್ಕೆ ನೀಡಲಿದೆ ಅಲ್ಲದೆ ಪಂಚವರ್ಣ ಮಹಿಳಾ ಸಾಧಕಿ ಪರಸ್ಕಾರವನ್ನು ಸಮಾಜಸೇವಕಿ ಆಶಾ ವಿ. ಪಡೆಯಲಿದ್ದಾರೆ.

ಪ್ರತಿಭಾ ಪುರಸ್ಕಾರ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ವಿದ್ಯಾರ್ಥಿವೇತನ, ಸ್ಥಳೀಯ ಅಂಗನವಾಡಿಗೆ ಸಮವಸ್ತ್ರ , ಕನ್ನಡ ಮಾಧ್ಯಮ ಸರಕಾರಿ ಶಾಲೆಗಳಿಗೆ ದತ್ತಿನಿಧಿ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಅಜಿತ್ ಆಚಾರ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!