ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ಪಂದಳ ರಾಜಮನೆತನದ ಹಿರಿಯ ಸದಸ್ಯ, ಪಂದಳಂ ಟ್ರಸ್ಟ್ ಮಾಜಿ ಅಧ್ಯಕ್ಷ ಪಿ.ಜಿ. ಶಶಿಕುಮಾರ್ ವರ್ಮ ವಿಧಿವಶರಾಗಿದ್ದಾರೆ.
ಅವರಿಗೆ 72 ವರ್ಷ ವಯಸ್ಸಾಗಿತ್ತು. ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವರನ್ನು ತಿರುವಲ್ಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಸೆಕ್ರೆಟೇರಿಯೆಟ್‌ನಲ್ಲಿ ಔದ್ಯೋಗಿಕ ಬದುಕು ಆರಂಭಿಸಿದ ಪಿ.ಜಿ. ಶಶಿಕುಮಾರ್, ಪಂದಳಂ ಅರಮನೆಯ ಕಾರ್ಯನಿರ್ವಾಹಕ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರು ಪತ್ನಿ, ಪುತ್ರಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.