ಮಗನ ಜೊತೆ ಟಿ20 ವಿಶ್ವಕಪ್ ಗೆಲುವನ್ನು ಸಂಭ್ರಮಿಸಿದ ಪಾಂಡ್ಯ: ಪತ್ನಿ ನತಾಶಾ ಮಿಸ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಟೀಮ್ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ತವರಿಗೆ ವಾಪಸಾಗಿದ್ದು, ಜುಲೈ 4 ರಂದು ತಂಡದ ಎಲ್ಲಾ ಆಟಗಾರರು ಅಭಿಮಾನಿಗಳೊಂದಿಗೆ ಈ ವಿಜಯವನ್ನು ಆಚರಿಸಿದ್ದರು. ಆ ಬಳಿಕ ಭಾರತ ತಂಡದ ಎಲ್ಲಾ ಆಟಗಾರರು ತಮ್ಮ ತಮ್ಮ ಮನೆಗೆ ಮರಳಿದ್ದು, ಕುಟುಂಬದೊಂದಿಗೆ ತಮ್ಮ ಸಂಭ್ರಮಾಚರಣೆಯನ್ನು ನಡೆಸಿದ್ದಾರೆ. ಅವರಲ್ಲಿ ಹಾರ್ದಿಕ್ ಪಾಂಡ್ಯ ಕೂಡ ಮನೆ ಸೇರಿದ್ದಾರೆ.

ತಮ್ಮ ಮನೆಗೆ ಮರಳಿರುವ ಹಾರ್ದಿಕ್ ಪಾಂಡ್ಯ, ಈ ಟಿ20 ವಿಶ್ವಕಪ್ ವಿಜಯೋತ್ಸವನ್ನು ತಮ್ಮ ಕುಟುಂಬದೊಂದಿಗೆ ಆಚರಿಸಿದ್ದಾರೆ. ಈ ಆಚರಣೆಯ ಫೋಟೋಗಳನ್ನು ಹಾರ್ದಿಕ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ಫೋಟೋಗಳಲ್ಲಿ ಹಾರ್ದಿಕ್ ಪಾಂಡ್ಯ ಅವರ ಮಗ ಅಗಸ್ತ್ಯ ಕಾಣಿಸಿಕೊಂಡಿದ್ದಾರೆ. ಆದರೆ ಅವರ ಮಡದಿ ನತಾಶಾ ಮಾತ್ರ ಕಾಣಿಸಿಕೊಂಡಿಲ್ಲ.

ಮಗನೊಂದಿಗಿನ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪಾಂಡ್ಯ, ‘ನನ್ನ 1! ನಾನು ಏನೇ ಮಾಡಿದರೂ ನಿನಗಾಗಿ ಮಾತ್ರ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಆದರೆ ಈ ಫೋಟೋಗಳಲ್ಲಿ ಹಾರ್ದಿಕ್ ಪತ್ನಿ ನತಾಶಾ ಎಲ್ಲೂ ಕಾಣಿಸಿಕೊಂಡಿಲ್ಲ. ಹೀಗಾಗಿ ಇವರಿಬ್ಬರ ನಡುವಿನ ಸಂಬಂಧದಲ್ಲಿ ಬಿರುಕು ಉಂಟಾಗಿರುವ ಊಹಾಪೋಹಗಳಿಗೆ ಇನ್ನಷ್ಟು ರೆಕ್ಕೆಪುಕ್ಕ ಸಿಕ್ಕಂತಾಗಿದೆ.

https://x.com/hardikpandya7/status/1809211216834756842?ref_src=twsrc%5Etfw%7Ctwcamp%5Etweetembed%7Ctwterm%5E1809211216834756842%7Ctwgr%5Ec9326cc2c9705964979904804681fc9ad43b3e7d%7Ctwcon%5Es1_&ref_url=https%3A%2F%2Ftv9kannada.com%2Fsports%2Fcricket-news%2Fnatasa-stankovic-skips-hardik-pandyas-t20-world-cup-celebration-watch-video-psr-861415.html

ಟಿ20 ವಿಶ್ವಕಪ್‌ನಲ್ಲಿ ಹಾರ್ದಿಕ್ ಪಾಂಡ್ಯ ಅದ್ಭುತ ಪ್ರದರ್ಶನ ನೀಡಿದ್ದರು. ಟೂರ್ನಿಯಲ್ಲಿ ಬ್ಯಾಟ್​ನಿಂದ 144 ರನ್ ಕಲೆಹಾಕಿದ ಪಾಂಡ್ಯ ಬೌಲಿಂಗ್​ನಲ್ಲಿ 11 ವಿಕೆಟ್ ಪಡೆದರು. ಫೈನಲ್ ಪಂದ್ಯದಲ್ಲೂ ತಮ್ಮ ಬೌಲಿಂಗ್ ಮೂಲಕ ಸಂಚಲನ ಮೂಡಿಸಿದ್ದರು. ಮೂರು ಓವರ್​ಗಳಲ್ಲಿ 20 ರನ್ ನೀಡಿ 3 ವಿಕೆಟ್ ಪಡೆದರು. ಇದಲ್ಲದೇ ಕೊನೆಯ ಓವರ್​ನಲ್ಲಿ 16 ರನ್ ಡಿಫೆಂಡ್ ಮಾಡಿದ್ದರು. ಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಪಾಂಡ್ಯ, ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಬಹುಮಾನ ಪಡೆದಿದ್ದು, ಟಿ20 ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!