ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿ ಇಂದು ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದ್ದು, ಎರಡೂ ತಂಡಗಳು ಮೊದಲ ಗೆಲುವು ಸಾಧಿಸುವ ಗುರಿಯನ್ನು ಹೊಂದಿವೆ.
ಇಂದಿನ ಪಂದ್ಯದಲ್ಲಿ ಒಂದು ಪಂದ್ಯದ ನಿಷೇಧದಿಂದಾಗಿ ಆಡಲು ಸಾಧ್ಯವಾಗದ ಹಾರ್ದಿಕ್ ಪಾಂಡ್ಯ ತಂಡಕ್ಕೆ ಮರಳಲಿದ್ದಾರೆ.
ಇನ್ನು ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಗುಜರಾತ್ ಟೈಟನ್ಸ್: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್, ಶೆರ್ಫೇನ್ ರುದರ್ಫೋರ್ಡ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ಆರ್ ಸಾಯಿ ಕಿಶೋರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಮುಂಬೈ ತಂಡ: ರೋಹಿತ್ ಶರ್ಮಾ, ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ತಿಲಕ್ ವರ್ಮಾ, ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ಟ್ರೆಂಟ್ ಬೌಲ್ಟ್, ಮುಜೀಬ್ ಉರ್ ರೆಹಮಾನ್, ಸತ್ಯನಾರಾಯಣ್ ರಾಜು.