CRICKET | ಪಂದ್ಯ ಗೆದ್ರೂ ಪಾಂಡ್ಯಗೆ ಖುಷಿ ಇಲ್ಲ, 12 ಲಕ್ಷ ರೂಪಾಯಿ ದಂಡ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಇಂಡಿಯನ್ ಪ್ರೀಮಿಯರ್ ಲೀಗ್‌ನ ನಿನ್ನೆ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡ ರೋಚಕ ಗೆಲುವು ಸಾಧಿಸಿದೆ. ಆದರೆ ಕ್ಯಾಪ್ಟನ್‌ ಹಾರ್ದಿಕ್‌ ಪಾಂಡ್ಯ ಮಾತ್ರ ಬೇಸರದಲ್ಲಿದ್ದಾರೆ.

ಪಂದ್ಯದಲ್ಲಿ ಸ್ಲೋ ರನ್‌ ರೇಟ್‌ ಕಾಯ್ದುಕೊಂಡ ಕಾರಣ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ಪಂಜಾಬ್ ಕಿಂಗ್ಸ್ ವಿರುದ್ಧ ಏಪ್ರಿಲ್ 18ರಂದು ಮುಲ್ಲನ್‌ಪುರದ ಪಿಸಿಎ ನ್ಯೂ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದರಿಂದ ಅವರಿಗೆ ದಂಡ ವಿಧಿಸಲಾಗಿದೆ’ ಎಂದು ಶುಕ್ರವಾರ ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ.

ಸ್ಲೋ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್‌ನ ನೀತಿ ಸಂಹಿತೆ ಅಡಿಯಲ್ಲಿ ಇದು ಅವರ ತಂಡದ ಮೊದಲ ಅಪರಾಧವಾಗಿದೆ. ಮೊದಲನೇ ಬಾರಿ ಆದ ಕಾರಣ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!