ಟೀಮ್ ನಿಂದ ಪಾಂಡ್ಯ ಔಟ್: ಉಪನಾಯಕನಾಗಿ ಕೆಎಲ್ ರಾಹುಲ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವಕಪ್ (World Cup 2023) ಟೂರ್ನಿಯಿಂದ ಹಾರ್ದಿಕ್ ಪಾಂಡ್ಯ (Hardik Pandya) ಹೊರಗುಳಿದಿದ್ದು, ಈ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣಾ ಮಂಡಳಿ (BCCI) ಕೆಎಲ್ ರಾಹುಲ್ (KL Rahul) ಅವರನ್ನು ಉಪನಾಯಕನನ್ನಾಗಿ (Vice Captain) ನೇಮಿಸಿದೆ.

ಗಾಯದ ಸಮಸ್ಯೆಯಿಂದಾಗಿ ಹಾರ್ದಿಕ್ ಪಾಂಡ್ಯ ವಿಶ್ವಕಪ್‌ನಿಂದ ಹೊರಗುಳಿದಿರುವುದನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಶನಿವಾರ ಬೆಳಗ್ಗೆ ಖಚಿತಪಡಿಸಿದೆ. ಅವರ ಅನುಪಸ್ಥಿತಿಯಲ್ಲಿ, ಕೆಎಲ್ ರಾಹುಲ್ ತಂಡದ ಉಳಿದ ಪಂದ್ಯಗಳಿಗೆ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಐಸಿಸಿ ಹೇಳಿದೆ.

ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕಾಲು ಉಳುಕಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ, ನೆದರ್ಲೆಂಡ್ಸ್ ಅಥವಾ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾಕ್ಕೆ ಮರಳುತ್ತಾರೆ ಎಂದು ರೋಹಿತ್ ಶರ್ಮಾ ಹೇಳಿದ್ದರು. ಆದರೀಗ ಪಾಂಡ್ಯ ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆ .

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!