ಪಾಂಡ್ಯ-ರಾಹುಲ್ ಸ್ಫೋಟಕ ಬ್ಯಾಟಿಂಗ್: ಆಸ್ಟ್ರೇಲಿಯಾ ಗೆಲುವಿಗೆ 209 ಟಾರ್ಗೆಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ 6 ವಿಕೆಟ್ ನಷ್ಟಕ್ಕೆ 208 ರನ್ ಸಿಡಿಸಿದೆ.

ಟಾಸ್ ಸೋತ ಟೀಂ ಇಂಡಿಯಾ ಮೊಹಾಲಿ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಇಳಿಯಿತು. ಕೆಎಲ್ ರಾಹುಲ್ ಹಾಗೂ ನಾಯಕ ರೋಹಿತ್ ಶರ್ಮಾ ಸ್ಫೋಟಕ ಆರಂಭ ಕೇವಲ 21 ರನ್‌ಗಳಿಗೆ ಅಂತ್ಯವಾಯ್ತು. ರೋಹಿತ್ ಶರ್ಮಾ 11 ರನ್ ಸಿಡಿಸಿ ನಿರ್ಗಮಿಸಿದರು. ಇತ್ತ ಕಳಪೆ ಫಾರ್ಮ್‌ನಿಂದ ಹೊರಬಂದ ವಿರಾಟ್ ಕೊಹ್ಲಿ ಮತ್ತೆ ನಿರಾಸೆ ಅನುಭವಿಸಿದರು.

ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಜೊತೆಯಾಟದಿಂದ ಟೀಂ ಇಂಡಿಯಾ ಸ್ಫೋಟಕ ಇನ್ನಿಂಗ್ಸ‌ನಿಂದ ಭಾರತ 100 ರನ್ ಗಡಿ ದಾಟಿತು. ಅಬ್ಬರಿಸಿದ ರಾಹುಲ್ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು. ಇತ್ತ ಸೂರ್ಯಕುಮಾರ್ ಯಾದವ್ ಉತ್ತಮ ಸಾಥ್ ನೀಡಿದರು.

ಕೆಎಲ್ ರಾಹುಲ್ 35 ಎಸೆತದಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 55 ರನ್ ಸಿಡಿಸಿ ಔಟಾದರು. ಇತ್ತ ಸೂರ್ಯಕುಮಾರ್ 46 ರನ್ ಸಿಡಿಸಿ ಔಟಾದರು.

ಮತ್ತೆ ಬಂದ ಅಕ್ಸರ್ ಪಟೇಲ್ ವಿಕೆಟ್ ಕೈಚೆಲ್ಲಿದರು. ಪಟೇಲ್ 6 ರನ್ ಸಿಡಿಸಿ ಔಟಾದರು. ಇತ್ತ ದಿನೇಶ್ ಕಾರ್ತಿಕ್ ಕೂಡ 6 ರನ್ ಸಿಡಿಸಿ ಔಟಾದರು. ಆದರೆ ಹಾರ್ದಿಕ್ ಪಾಂಡ್ಯ ಸ್ಫೋಟಕ ಇನ್ನಿಂಗ್ಸ್‌ನಿಂದ ಟೀಂ ಇಂಡಿಯಾ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿತು. ಅಬ್ಬರಿಸಿದ ಪಾಂಡ್ಯ ಹಾಫ್ ಸೆಂಚುರಿ ಸಿಡಿಸಿದರು. ಹಾರ್ದಿಕ್ ಪಾಂಡ್ಯ 30 ಎಸೆತದಲ್ಲಿ 7 ಬೌಂಡರಿ 5 ಸಿಕ್ಸರ್ ಮೂಲಕ ಅಜೇಯ 71 ರನ್ ಸಿಡಿಸಿದರು. ಇದರೊಂದಿಗೆ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 208 ರನ್ ಸಿಡಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here