ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾರ್ವಜನಿಕ ಸೇವಾ ವಾಹನಗಳಲ್ಲಿ ವೆಹಿಕಲ್ ಲೋಕೇಷನ್ ಟ್ರ್ಯಾಕಿಂಗ್ ಡಿವೈಸ್ (ವಿಎಲ್ಟಿ) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಇಂದಿನಿಂದ ಕಡ್ಡಾಯಗೊಳಿಸಲಾಗಿದೆ.
ರಾಜ್ಯ ಸರ್ಕಾರದ ಆದೇಶದ ಮೇರೆಗೆ 2024ರ ನವೆಂಬರ್ 30ರೊಳಗೆ ಪ್ಯಾನಿಕ್ ಬಟನ್ ಅಳವಡಿಕೆಗೆ ಗಡುವು ನೀಡಲಾಗಿದೆ.
ರಾಜ್ಯದಲ್ಲಿ ಮಹಿಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಈ ಯೋಜನೆ ತ್ವರಿತವಾಗಿ ಜಾರಿಯಾಗಬೇಕಿರುವುದರಿಂದ ಆರ್ಟಿಒಗಳಲ್ಲಿ ಈ ಯೋಜನೆಗೆ ಒಳಪಡುವ ವಾಹನಗಳಿಗೆ ಮಾತ್ರ ಎಫ್.ಸಿ ನವೀಕರಣಕ್ಕೆ ಸರ್ಕಾರ ಸೂಚನೆ ನೀಡಿದೆ.
ಬೆಲೆ ಎಷ್ಟು?
ಪ್ಯಾನಿಕ್ ಬಟನ್ ಒಳಗೊಂಡ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ ಬೆಲೆ 7,599 ರೂ.
ಯಾವ ವಾಹನಗಳಿಗೆ ಕಡ್ಡಾಯ?
ಸಾರ್ವಜನಿಕ ಸೇವಾ ವಾಹನಗಳು ಅಂದರೆ ಯೆಲ್ಲೋ ಬೋರ್ಡ್ನ ಟ್ಯಾಕ್ಸಿಗಳು, ಕ್ಯಾಬ್ಗಳು, ಖಾಸಗಿ ಬಸ್ಗಳು, ನ್ಯಾಷನಲ್ ಪರ್ವಿುಟ್ ಹೊಂದಿರುವ ಗೂಡ್ಸ್ ವಾಹನಗಳಿಗೆ ಈ ಆದೇಶ ಅನ್ವಯವಾಗಲಿದೆ.