`ವರಾಹ ರೂಪಂ’ ಹಾಡಿಗೆ ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಆವಾಹನೆಯಾದ ಪಂಜುರ್ಲಿ ದೈವ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರಿನ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ವಿದ್ಯಾರ್ಥಿ (College Student) ಮೇಲೆ ಪಂಜುರ್ಲಿ ದೈವ (Panjurli Daiva) ಆವಾಹನೆಯಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ (PUC Student) ಕಾಂತಾರ ಸಿನಿಮಾದ `ವರಾಹ ರೂಪಂ’ ಹಾಡಿಗೆ ನೃತ್ಯ ಮಾಡುತ್ತಿದ್ದನು

ಬೆಂಗಳೂರಿನ ಹೊಂಬೇಗೌಡ ಪಿಯು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವಿಶಾಲ್ ಪಂಜುರ್ಲಿ ದೈವದ ವೇಷ ಧರಿಸಿದ್ದ. ಕೆಲ ನಿಮಿಷಗಳ ಬಳಿಕ ವೇದಿಕೆಯಿಂದ ಕೆಳಗೆ ಬಂದು ನರ್ತಿಸುತ್ತಿದ್ದಂತೆ ದೈವ ಆವಾಹನೆಯಾಗಿದೆ. ಬಳಿಕ ಸಹಪಾಠಿಗಳು ಹಾಗೂ ಶಿಕ್ಷಕರು ವಿದ್ಯಾರ್ಥಿಯನ್ನು ಸಮಾಧಾನಪಡಿಸಿದ್ದಾರೆ. ಕಾರ್ಯಕ್ರಮ ಆಯೋಜಕರು ತಕ್ಷಣವೇ ಹಾಡು ನಿಲ್ಲಿಸಿದ್ದಾರೆ. ಸದ್ಯ ಈ ದೃಶ್ಯಕಂಡು ವಿದ್ಯಾರ್ಥಿ ಪೋಷಕರು ಶಾಖ್ ಆಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!