ಶತಕ ಬಾರಿಸಿದ ಕೂಡಲೇ ಮೈದಾನದಲ್ಲಿ ಪಲ್ಟಿ ಹೊಡೆದು ವಿಭಿನ್ನವಾಗಿ ಸಂಭ್ರಮಿಸಿದ ಪಂತ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ನಡೆದ ಆರ್‌ಸಿಬಿ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ ಲಕ್ನೋ ಸೂಪರ್​ಜೈಂಟ್ಸ್ ನಾಯಕ ರಿಷಭ್ ಪಂತ್ ಅದ್ಭುತ ಪ್ರದರ್ಶನ ನೀಡಿ ಆರ್‌ಸಿಬಿ ವಿರುದ್ಧ ಸ್ಫೋಟಕ ಶತಕ ಬಾರಿಸಿದ್ದಾರೆ.

ಐಪಿಎಲ್‌ನಲ್ಲಿ 2018 ರಲ್ಲಿ ಕೊನೆಯದಾಗಿ ಶತಕ ಬಾರಿಸಿದ್ದ ಪಂತ್ ಇದೀಗ 7 ವರ್ಷಗಳ ನಂತರ ಐಪಿಎಲ್‌ನಲ್ಲಿ ಶತಕ ಬಾರಿಸಿದ್ದು, ಶತಕ ಬಾರಿಸಿದ ಕೂಡಲೇ ಮೈದಾನದಲ್ಲಿ ಪಲ್ಟಿ ಹೊಡೆದು ವಿಭಿನ್ನವಾಗಿ ಸಂಭ್ರಮಿಸಿದ್ದಾರೆ. ಇದೀಗ ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಈ ಪಂದ್ಯದಲ್ಲಿ 61 ಎಸೆತಗಳನ್ನು ಎದುರಿಸಿದ ಪಂತ್ 118 ರನ್​ಗಳ ಅಜೇಯ ಇನ್ನಿಂಗ್ಸ್ ಆಡಿದರು. ಅವರ ಈ ಇನ್ನಿಂಗ್ಸ್‌ನಲ್ಲಿ 11 ಬೌಂಡರಿಗಳು ಮತ್ತು 8 ಸಿಕ್ಸರ್‌ಗಳು ಸೇರಿದ್ದವು. ಕೊನೆಯವರೆಗೂ ಅಜೇಯರಾಗಿ ಉಳಿದ ಪಂತ್ 193.44 ಸ್ಟ್ರೈಕ್ ರೇಟ್‌ನೊಂದಿಗೆ ಬ್ಯಾಟಿಂಗ್ ಮಾಡಿದರು. ಪಂತ್ ಅವರ ಈ ಅಬ್ಬರದ ಬ್ಯಾಟಿಂಗ್​ನಿಂದ ಲಕ್ನೋ ತಂಡ 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 227 ರನ್ ಗಳಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!