Monday, March 27, 2023

Latest Posts

ಈಜುಕೊಳದಲ್ಲಿ ವಾಕ್ ಮಾಡುವ ವಿಡಿಯೋ ಹಂಚಿಕೊಂಡ ಪಂತ್: ಹೇಗಿದೆ ಅವರ ಅರೋಗ್ಯ?

ಹೊಸದಿಗಂತ ಡಿಜಿಟಲ್ ಡೆಸ್ಕ್
 
ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪವಾಡಸದೃಶವಾಗಿ ಪಾರಾಗಿದ್ದ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಭ್ ಪಂತ್ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಕೆ ಆಗುತ್ತಿದ್ದಾರೆ .

ಇದೀಗ ಶುಶ್ರೂಷೆಯ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿಪಂತ್ ಹಂಚಿಕೊಂಡಿದ್ದಾರೆ.
ಪಂತ್ ಈಜುಕೊಳದಲ್ಲಿ ವಾಕ್ ಮಾಡುತ್ತಿದ್ದಾರೆ. ಅಪಘಾತದಿಂದಾಗಿ ಅವರ ಕಾಲಿಗೆ ಗಂಭೀರವಾದ ಗಾಯವಾಗಿದ್ದು, ಇದೀಗ ಪಾದಗಳಿಗೆ ಶಕ್ತಿ ತುಂಬುವ ಸಲುವಾಗಿ ಶುಶ್ರೂಷೆ ನೀಡಲಾಗುತ್ತಿದೆ. ಅದರ ಭಾಗವಾಗಿ ನೀರಿನಲ್ಲಿ ನಡೆಯುತ್ತಿರುವ ವಿಡಿಯೋವನ್ನು ಪಂತ್ ಹಂಚಿಕೊಂಡಿದ್ದಾರೆ.

ಈ ವಿಡಿಯೋಗೆ ಸಣ್ಣಪುಟ್ಟ ವಿಷಯಗಳಿಗೂ, ದೊಡ್ಡ ವಿಷಯಗಳಿಗೂ…ಎಲ್ಲದಕ್ಕೂ ನಾನು ಕೃತಜ್ಞನಾಗಿದ್ದೀನಿ ಎಂದು ಕ್ಯಾಪ್ಶನ್ ನೀಡಿದ್ದಾರೆ. ಒಟ್ಟಿನಲ್ಲಿ ನಡೆಯಲು ಯತ್ನಿಸುತ್ತಿರುವ ವಿಡಿಯೋ ಹಂಚಿಕೊಳ್ಳುವ ಮೂಲಕ ರಿಷಭ್ ಪಂತ್ ಶೀಘ್ರದಲ್ಲೇ ಗುಣಮುಖನಾಗಲಿದ್ದೇನೆ ಎಂಬ ಸಂದೇಶ ರವಾನಿಸಿದ್ದಾರೆ.

ಸದ್ಯ ಚಿಕಿತ್ಸೆಯಲ್ಲಿರುವ ರಿಷಭ್ ಪಂತ್ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲು ಕನಿಷ್ಠ 5-6 ತಿಂಗಳು ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!