ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ಆನ್ ಲೈನ್ ಡೆಸ್ಕ್
ಭಾರತ ಎರಡನೇ ಇನ್ನಿಂಗ್ಸ್ನಲ್ಲಿ 466 ರನ್ ಗಳಿಗೆ ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡಿದ್ದು, ಇಂಗ್ಲೆಂಡ್ ಗೆಲ್ಲಲು ಈಗ 368 ರನ್ ಗಳಿಸಬೇಕಿದೆ.
ಕೆಳ ಕ್ರಮಾಂಕದಲ್ಲಿ ರಿಷಭ್ ಪಂತ್ ಮತ್ತು ಶಾರ್ದೂಲ್ ಠಾಕೂರ್ ಅರ್ಧಶತಕ ಗಳಿಸಿ ಮಿಂಚಿದ್ದು, ಮೊದಲ ಇನಿಂಗ್ಸ್ ನಲ್ಲಿ ಅರ್ಧಶತಕ ಸಿಡಿಸಿ ತಂಡವನ್ನು ಮುನ್ನಡೆಸಿದ್ದ ಶಾರ್ದೂಲ್ ಠಾಕೂರ್ ಎರಡನೇ ಇನಿಂಗ್ಸ್ ನಲ್ಲೂ ಅರ್ಧಶತಕ ಸಿಡಿಸಿ ತಂಡಕ್ಕೆ ತಮ್ಮದೆಯಾದ ಕೊಡುಗೆ ನೀಡಿದರು. ಶಾರ್ದೂಲ್ 70 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 60 ರನ್ ಗಳಿಸಿದರೆ, ರಿಷಭ್ ಪಂತ್ 105 ಎಸೆತಗಳಲ್ಲಿ 4 ಬೌಂಡರಿ ಸಹಾಯದಿಂದ ಅರ್ಧಶತಕ ಪೂರೈಸಿದರು. ಉಮೇಶ್ ಯಾದವ್ 25 ಹಾಗು ಬೂಮ್ರಾ 24 ರನ್ ಗಳಿಸಿ ಭಾರತಡಾ ಸುಸ್ಥಿತಿಗೆ ನೆರವಾದರು.