Tuesday, March 28, 2023

Latest Posts

ಅಪಘಾತದ ನಂತರ ಮೊದಲ ಬಾರಿಗೆ ಹೆಜ್ಜೆ ಹಾಕಿದ ಪಂತ್:‌ ಫೋಟೊ ಹಂಚಿಕೊಂಡ ಕ್ರಿಕೆಟರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಕಾರು ಅಪಘಾತದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಪಂತ್ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಬಲ ಮೊಣಕಾಲಿನ ಅಸ್ಥಿರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾದ ಪಂತ್, ವಾಕಿಂಗ್ ಸ್ಟಿಕ್ ಸಹಾಯದಿಂದ ನಿಧಾನವಾಗಿ ನಡೆಯಲು ಪ್ರಾರಂಭಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋವನ್ನು ಪಂತ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ʻಒಂದು ಹೆಜ್ಜೆ ಮುಂದೆ.. ಒಂದು ಹೆಜ್ಜೆ ಬಲ.. ಒಂದು ಹೆಜ್ಜೆ ಉತ್ತಮʼ ಎಂದು ಶೀರ್ಷಿಕೆ ಕೊಟ್ಟಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ನಮಗೆ ಪಂತ್ ಬೇಗ ವಾಪಸ್ ಬೇಕು ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ಪಂತ್ ಅವರು ಒಂದೊಂದೇ ಹೆಜ್ಜೆ ಇಡಲು ಆರಂಭಿಸಿರುವ ಫೋಟೋವನ್ನು ಹಂಚಿಕೊಂಡಾಗ, ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಮತ್ತು ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಪ್ರತಿಕ್ರಿಯಿಸಿದ್ದಾರೆ. ಪಂತ್ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹೃತ್ಪೂರ್ವಕ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ.

ಪಂತ್ ಕಳೆದ ವರ್ಷ ಡಿಸೆಂಬರ್ 30 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದರು. ಕಾರನ್ನು ತಾನೇ ಓಡಿಸುತ್ತಿದ್ದ ಪಂತ್ ಹರಿದ್ವಾರ-ದೆಹಲಿ ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು. ಅದೃಷ್ಟವಶಾತ್ ಪಂತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!