Monday, September 26, 2022

Latest Posts

ಪತ್ರಚಾಲ್​ ಹಗರಣ: ಚಾರ್ಜ್​ಶೀಟ್​​ ನಲ್ಲಿ ಸೇರಿತು ಶರದ್​ ಪವಾರ್​ ಹೆಸರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪತ್ರಚಾಲ್​ ಹಗರಣದಲ್ಲಿ ಈಗಾಗಲೇ ಶಿವಸೇನಾ ಮುಖಂಡ ಸಂಜಯ್ ರಾವತ್​ ನ್ಯಾಯಾಂಗ ಬಂಧನದಲ್ಲಿದ್ದು, ಇದೇ ಪ್ರಕರಣದಲ್ಲಿ ಇದೀಗ ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್​ ಅವರೂ ಭಾಗಿಯಾಗಿರುವ ಆರೋಪ ಕೇಳಿ ಬಂದಿದ್ದು, ಇಡಿ ಸಲ್ಲಿಸಿದ ಚಾರ್ಜ್​ಶೀಟ್​​ನಲ್ಲಿ ಅವರ ಹೆಸರಿದೆ.
ಪತ್ರಚಾಲ್ ಪುನರಾಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ 2006 -07 ಸಂಜಯ್ ರಾವತ್ ಅವರು ಆಗಿನ ಕೇಂದ್ರ ಕೃಷಿ ಸಚಿವರಾಗಿದ್ದ ಶರದ್​ ಪವಾರ್​ ಜೊತೆಗೂಡಿ ಸಭೆ ನಡೆಸಿದ್ದರು ಎಂದು ಇಡಿ ಸಲ್ಲಿಸಿರುವ ಚಾರ್ಜ್ ಶೀಟ್‌ನಲ್ಲಿ ಆರೋಪಿಸಲಾಗಿದೆ.
ಕಾಂಗ್ರೆಸ್​, ಶಿವಸೇನೆ ಜೊತೆಗೆ ಎನ್​ಸಿಪಿ ಸೇರಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲಾಗಿತ್ತು. ಆದರೆ, ಸಿದ್ಧಾಂತದ ತಿಕ್ಕಾಟದಲ್ಲಿ ಸಿಎಂ ಉದ್ಧವ್​ ಠಾಕ್ರೆ ವಿರುದ್ಧ ಈಗಿನ ಸಿಎಂ ಏಕನಾಥ್​ ಶಿಂಧೆ ಬಣ ಸಿಡಿದೆದ್ದು ಸರ್ಕಾರ ಪತನಕ್ಕೆ ಕಾರಣವಾಗಿತ್ತು. ಬಳಿಕದ ಬೆಳವಣಿಗೆಯಲ್ಲಿ ಶಿವಸೇನೆ ಸಂಸದ ಸಂಜಯ್​ ರಾವತ್​ರನ್ನು ಪತ್ರಚಾಲ್​ ಹಗರಣದಲ್ಲಿ ಬಂಧಿಸಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!