ಹೊಸದಿಗಂತ ಡಿಜಿಟಲ್ ಡೆಸ್ಕ್;
ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಪುರುಷರ ಹೈಜಂಪ್-ಟಿ64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಚಿನ್ನದ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಇದು ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಸಿಕ್ಕ 26 ನೇ ಪದಕ ಮತ್ತು ಆರನೇ ಚಿನ್ನದ ಪದಕವಾಗಿದೆ.
ಪ್ರವೀಣ್ ಕುಮಾರ್ ಅವರು 2.08 ಮೀಟರ್ ಎತ್ತರ ಜಿಗಿಯುವ ಮೂಲಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು. ಇದು ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಭಾರತಕ್ಕೆ ಇದುವರೆಗೆ ಸಿಕ್ಕಿರುವ 11ನೇ ಪದಕವಾಗಿದೆ.