ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಇಂದು ನಡೆದ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ಎಸ್ಯು5 ಈವೆಂಟ್‌ನಲ್ಲಿ ಭಾರತದ ತುಳಸಿಮತಿ ಮುರುಗೇಶನ್ ಬೆಳ್ಳಿ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಫೈನಲ್ ಪಂದ್ಯದಲ್ಲಿ ಚೀನಾದ ಕ್ಯು ಕ್ಸಿಯಾ ಯಾಂಗ್ ವಿರುದ್ಧ 0-2 (17-21, 10-21) ರಿಂದ ಸೋತು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು. ಮಹಿಳೆಯರ SU5 ವಿಭಾಗದಲ್ಲಿ ಚೊಚ್ಚಲ ಪ್ಯಾರಾಲಿಂಪಿಕ್ಸ್ ಬೆಳ್ಳಿ ಪದಕ ಗೆದ್ದ ತುಳಸಿಮತಿ ಮುರುಗೇಶನ್ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಕಂಚು ಗೆದ್ದ ಮನೀಶಾ ರಾಮದಾಸ್
ಮತ್ತೊಂದೆಡೆ, ಪ್ಯಾರಾ ಬ್ಯಾಡ್ಮಿಂಟನ್‌ನ ಮಹಿಳೆಯರ SU5 ವಿಭಾಗದಲ್ಲಿ ಅಂದರೆ ಇದೇ ಈವೆಂಟ್‌ನಲ್ಲಿ ಮನೀಶಾ ರಾಮದಾಸ್ ಕಂಚಿನ ಪದಕವನ್ನು ತನ್ನದಾಗಿಸಿಕೊಂಡರು. ಸೆಮಿಫೈನಲ್ ಪಂದ್ಯದಲ್ಲಿ ಮನೀಶಾ ರಾಮದಾಸ್ ಇದೇ ತುಳಸಿಮತಿ ಮುರುಗೇಶನ್ ವಿರುದ್ಧ ಸೋತಿದ್ದರು. ಹೀಗಾಗಿ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಮನೀಶಾ ರಾಮದಾಸ್, ಡೆನ್ಮಾರ್ಕ್‌ನ ಕ್ಯಾಥರೀನ್ ರೋಸೆಂಗ್ರೆನ್ ಅವರನ್ನು ಏಕಪಕ್ಷೀಯವಾಗಿ ಸೋಲಿಸಿ ಕಂಚು ಗೆದ್ದರು.