ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಮೇಶ್ವರ್, ತುಮಕೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ವಸಂತನರಸಾಪುರದಲ್ಲಿ 3 ಸಾವಿರ ಎಕರೆ ಭೂಮಿ ನೋಡಿದ್ದೇವೆ. ಸೀಬಿ ದೇವಸ್ಥಾನದ ಬಳಿ 4-5 ಸಾವಿರ ಎಕರೆ ಭೂಮಿ ಗುರುತಿಸಿದ ಪ್ರಸ್ತಾವನೆ ಸರ್ಕಾರಕ್ಕೆ ಹೋಗಿದೆ. ಅಲ್ಲದೆ ಅಂಬೇಡ್ಕರ್ ಪುತ್ಥಳಿ ಟೌನ್ ಹಾಲ್‌ನಲ್ಲಿ ಸರ್ಕಲ್ ಮಾಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.