Tuesday, December 23, 2025

ಪರಮೇಶ್ವರ್‌ ಸಿಎಂ ಆಗ್ಬೇಕು: ದಲಿತ ಸಂಘಟನೆಗಳ ಪ್ರತಿಭಟನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದಲಿತ ಮುಖ್ಯಮಂತ್ರಿಗಾಗಿ ಒತ್ತಾಯಿಸಿ ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದ ದಲಿತ ಸಂಘಟನೆಗಳು ಪರಮೇಶ್ವರ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಒತ್ತಾಯಿಸಿವೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ ಅವರು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಜಿ ಪರಮೇಶ್ವರ, ‘ನಾನು ಸಿಎಂ ಹುದ್ದೆ ಮತ್ತು ಸಂಪುಟ ಪುನರ್ ರಚನೆ ವಿಷಯಕ್ಕೆ ಸಂಬಂಧಿಸಿದಂತೆ ಏನನ್ನೂ ಮಾತನಾಡಲು ಬಯಸುವುದಿಲ್ಲ. ನಾನು ಈಗಾಗಲೇ ಸಾಕಷ್ಟು ಮಾತನಾಡಿದ್ದೇನೆ’ ಎಂದು ಹೇಳಿದರು.

ಮಂಗಳವಾರ ಮುಂಜಾನೆ ತುಮಕೂರಿನಲ್ಲಿ ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಜಿ ಪರಮೇಶ್ವರ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ದಲಿತ ಸಂಘಟನೆಯ ನಾಯಕ ಛಲವಾದಿ ಶೇಖರ್ ಕಾಂಗ್ರೆಸ್ ಹೈಕಮಾಂಡ್ ಅನ್ನು ಒತ್ತಾಯಿಸಿದರು.

error: Content is protected !!