ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದು ತಿಂಗಳ ನಂತರ ನಿರ್ದೇಶಕ ತರುಣ್ ಸುಧೀರ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರನ್ನು ಭೇಟಿಯಾಗಲು ಬಂದಿದ್ದಾರೆ
ತರುಣ್ ಸುಧೀರ್ ಮತ್ತು ಅವರ ಸ್ನೇಹಿತರು ಬೆಂಗಳೂರಿನ ಪರಪ್ಪ ಅಗ್ರಹಾರ ಜೈಲಿಗೆ ಬಂದು ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿಯಾಗಳಿದ್ದಾರೆ. ಮದುವೆಯ ಆಮಂತ್ರಣ ಪತ್ರಿಕೆ ನೀಡಲು ಬಂದಿದ್ದಾರೆ ಎಂದು ತಿಳಿದುಬಂದಿದೆ.
ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ವಿವಾಹವಾಗುತ್ತಿದ್ದು, ದರ್ಶನ್ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ, ದರ್ಶನ್ ಅವರನ್ನು ಭೇಟಿ ಮಾಡಲು ಬಂದಿದ್ದಾರೆ ಎನ್ನಲಾಗಿದೆ.
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತವರ ಗ್ಯಾಂಗ್ ಗೆ ರಿಮಾಂಡ್ ಅವಧಿಯನ್ನು ಆಗಸ್ಟ್ 1ರವರೆಗೆ ವಿಸ್ತರಿಸಲಾಗಿದೆ.