ಕೆಲಸ ಸಿಗದ ಮಗನಿಗೆ ಮನೆಗೆ ಬರಬೇಡ ಎಂದ ಪೋಷಕರು! ದುಡುಕಿನ ನಿರ್ಧಾರ ತೆಗೆದುಕೊಂಡಿದ್ಯಾಕೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೆಲಸ  ಸಿಗದಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ.

ಬಿಹಾರ ಮೂಲದ ರಾಹುಲ್ ಕುಮಾರ್ ಯಾದವ್ (22) ಮೃತ ಯುವಕ. ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ರಾಹುಲ್ ಕೆಲಸ ಸಿಗದೆ ವಾಪಸ್ ಊರಿಗೆ ಹೋಗಲು ನಿರ್ಧಾರ ಮಾಡಿದ್ದ.

ಇತ್ತ ಪೋಷಕರು ಊರಿಗೆ ಬರಲು ನಿರಾಕರಿಸಿದರು ಎನ್ನಲಾಗಿದೆ. ಈ ಹಿನ್ನೆಲೆ ಮನನೊಂದ ಯುವಕ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!