ಪರೇಶ್ ಮೇಸ್ತ ಸಾವಿನ ಪ್ರಕರಣ: ಶೀಘ್ರದಲ್ಲೇ ಮರು ತನಿಖೆ ಎಂದ ಸಚಿವ ಕೋಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪರೇಶ್ ಮೇಸ್ತ ಸಾವಿನ ಪ್ರಕರಣದ ಮರು ತನಿಖೆ ಶೀಘ್ರದಲ್ಲೇ ನಡೆಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಪರೇಶ್ ಮೇಸ್ತ ಸಾವಿನ ಪ್ರಕರಣದ ಮರು ತನಿಖೆ ನಡೆಸುವಂತೆ ಮೇಸ್ತ ತಂದೆ ಕಮಲಾಕರ್ ಸಿಎಂ ಬೊಮ್ಮಾಯಿಗೆ ಮನವಿ ಸಲ್ಲಿಸಿದ್ದಾರೆ.ಶೀಘ್ರದಲ್ಲೇ ಪ್ರಕರಣವನ್ನು ಮರು ತನಿಖೆಗೊಳಪಡಿಸಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದ್ದಾರೆ.
ಪರೇಶ್ ಮೇಸ್ತ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಇತ್ತೀಚೆಗೆ ಸಿಬಿಐ ತನಿಖಾ ವರದಿಯಲ್ಲಿ ಬಯಲಾಗಿತ್ತು. ಆದರೆ ಪರೇಶ್ ಮೇಸ್ತ ತಂದೆ ಕಮಲಾಕರ ಮೇಸ್ತ ನನ್ನ ಮಗನದ್ದು ಕೊಲೆ , ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ, ನನ್ನ ಮಗ ಪರೇಶ್ ಮೇಸ್ತ ಸಾವಿನ ಪ್ರಕರಣವನ್ನು ಮರು ತನಿಖೆಗೊಳಪಡಿಸಬೇಕು ಎಂದು ಮನವಿ ಸಲ್ಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!