ಏ.1ರಂದು ʼಪರೀಕ್ಷಾ ಪೆ ಚರ್ಚಾʼ; ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಲಿದ್ದಾರೆ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ 5 ನೇ ಆವೃತ್ತಿಯು ಏ.1 ರಂದು ದೆಹಲಿಯ ಟಾಲ್ಕೋಟಾ ಕ್ರೀಡಾಂಗಣದಲ್ಲಿ ಆಯೋಜಿಲಾಗಿದೆ ಎಂದು ಕೇಂದ್ರ ಸರ್ಕಾರದ ಶಿಕ್ಷಣಾ ಸಚಿವಾಲಯ ತಿಳಿಸಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪರೀಕ್ಷೆ ಎದುರಿಸಲು ಸಜ್ಜಾಗುತ್ತಿರುವ ವಿದ್ಯಾರ್ಥಿಗಳ ಜೊತೆಗೆ ಚರ್ಚೆ ನಡೆಸಿ ಆತ್ಮವಿಶ್ವಾಸ ತುಂಬಲಿದ್ದಾರೆ.
ಪರೀಕ್ಷೆಯ ಸಂದರ್ಭದಲ್ಲಿ ಮನಸ್ಸನ್ನು ಶಾಂತವಾಗಿಸಿಕೊಳ್ಳುವುದು ಹಾಗೂ ಒತ್ತಡವನ್ನು ನಿಭಾಯಿಸುವುದರ ಕುರಿತಾಗಿ ಪ್ರಧಾನಿಯವರು ತಮ್ಮ ವಿಚಾರಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ.
9, 10, 11 ಮತ್ತು 12 ನೇ ತರಗತಿಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ವರ್ಷ ಪೋಷಕರು ಮತ್ತು ಶಿಕ್ಷಕರಿಗೂ ಈ ಚರ್ಚೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮಕ್ಕೆ 12.12 ಲಕ್ಷ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.

ಕಾರ್ಯಕ್ರಮದ ಪ್ರಯುಕ್ತ ಬರಹ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಈವರೆಗೆ ಮಕ್ಕಳು, ಪೊಷಕರು, ಶಿಕ್ಷಕರು ಸೇರಿ 15.7 ಲಕ್ಷ ಮಂದಿ ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ ಎಂದು ಮಾಹಿತಿ ನೀಡಿದೆ.
ಆಸಕ್ತ ವಿದ್ಯಾರ್ಥಿಗಳು innovateindia.mygov.in/ppc-2022 ವೆಬ್ ಸೈಟ್‌ ನಲ್ಲಿ ನಲ್ಲಿ ಹೆಚ್ಚಿನ ವಿವರಗಳನ್ನು ಪರಿಶೀಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!