ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ಪರಿಣಿತಿ ಚೋಪ್ರಾ ತಾಯಿಯಾಗ್ತಿದ್ದಾರೆ. ಪರಿಣಿತಿ ಮತ್ತು ರಾಘವ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ ಅವರು ಒಂದು ಫೋಟೋ ಹಂಚಿಕೊಂಡಿದ್ದಾರೆ.
ಈ ಫೋಟೋದಲ್ಲಿ 1+1=3 ಎಂದು ಬರೆಯಲಾಗಿದೆ. ಅಲ್ಲದೆ, ರಾಘವ್ ಮತ್ತು ಪರಿಣಿತಿ ಅವರ ವೀಡಿಯೊ ವೈರಲ್ ಆಗಿದೆ. ಈ ವೀಡಿಯೊದಲ್ಲಿ, ಇಬ್ಬರೂ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಈ ಫೋಟೋ ಮತ್ತು ವೀಡಿಯೊವನ್ನು ಹಂಚಿಕೊಂಡ ಪರಿಣಿತಿ, ‘ನಮ್ಮ ಪುಟ್ಟ ಜಗತ್ತು… ದೇವರ ದಯೆಯಿಂದ, ಶೀಘ್ರದಲ್ಲೇ ಬರಲಿದೆ’ ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ.
ಪರಿಣಿತಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪೋಸ್ಟ್ ವೈರಲ್ ಆಗಿದೆ. ಅಭಿಮಾನಿಗಳು ಈ ಪೋಸ್ಟ್‌ಗೆ ಲೈಕ್‌ಗಳು ಮತ್ತು ಕಾಮೆಂಟ್‌ಗಳ ಸುರಿಮಳೆ ಸುರಿಸಿದ್ದಾರೆ. ಅನೇಕರು ಪರಿಣಿತಿ ಮತ್ತು ರಾಘವ್ ಅವರನ್ನು ಅಭಿನಂದಿಸಿದ್ದಾರೆ. ಕೆಲವರು ಪರಿಣಿತಿ ಅವರ ಹೊಸ ಪ್ರಯಾಣಕ್ಕೆ ಶುಭ ಹಾರೈಸಿದ್ದಾರೆ.
View this post on Instagram