ಹೊಸದಿಗಂತ ಡಿಜಿಟಲ್ ಡೆಸ್ಕ್;
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪುರುಷರ ಕುಸ್ತಿ ಸ್ಪರ್ಧೆಯ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ 21 ವರ್ಷದ ಭಾರತದ ಅಮನ್ ಸೆಹ್ರಾವತ್ ಸೆಮಿ ಫೈನಲ್‌ಗೆ ಪ್ರವೇಶಿಸಿ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ.
ಇಂದು ರಾತ್ರಿ 9.45ಕ್ಕೆ ನಡೆಯುವ ಸೆಮಿಫೈನಲ್ ಪಂದ್ಯದಲ್ಲಿ ಅಮನ್ ಜಪಾನ್ ರೇ ಹಿಗುಚಿ ಸವಾಲು ಎದುರಿಸಲಿದ್ದಾರೆ.
ಎದುರಾಳಿಗೆ ಒಂದೇ ಒಂದು ಅಂಕ ಬಿಟ್ಟು ಕೊಡದೆ ಸೆಮಿಫೈನಲ್ ಪ್ರವೇಶಿಸಿರುವ ಅಮನ್ ಸೆಹ್ರಾವತ್ ಭಾರತಕ್ಕೆ ಅನಿರೀಕ್ಷಿತ ಪದಕೊಂದನ್ನು ಗೆಲ್ಲುವ ತವಕದಲ್ಲಿದ್ದಾರೆ.
ಗುರುವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅಮನ್ ಅಲ್ಬೆನಿಯಾದ ಝೆಲಿಮ್ಖಾನ್ ಅಬಕರೋವ್ ವಿರುದ್ಧ 12-0 ಅಂತರದ ಭರ್ಜರಿ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದರು. ಇದಕ್ಕೂ ಮುನ್ನ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ನಾರ್ತ್ ಮ್ಯಾಸೆಡೋನಿಯಾದ ವ್ಲಾಡಿಮಿರ್ ಎಗೊರೊವ್ ವಿರುದ್ಧ 10-0 ಅಂತರದ ಮಣಿಸಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟಿದ್ದರು.