Paris olympics | ಅರ್ಜೆಂಟೀನಾ – ಭಾರತ ನಡುವಣ ಹಾಕಿ ಪಂದ್ಯ ಡ್ರಾನಲ್ಲಿ ಅಂತ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ಪುರುಷರ ಹಾಕಿ ತಂಡವು ಪೂಲ್ ಬಿ ಗುಂಪು ಹಂತದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದೆ.
ಸೋಮವಾರ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಅರ್ಜೆಂಟೀನಾ ವಿರುದ್ಧ 1-1 ಡ್ರಾ ಸಾಧಿಸಿತು.

ಅರ್ಜೆಂಟೀನಾ ಪರ ಲುಕಾಸ್ ಮಾರ್ಟಿನೆಜ್ (22ನೇ ನಿಮಿಷ) ಏಕೈಕ ಗೋಲು ಗಳಿಸಿದರು. ಇದೇ ವೇಳೆ ಪಂದ್ಯ ಮುಗಿಯಲು ಕೇವಲ 2 ನಿಮಿಷ ಬಾಕಿ ಇರುವಾಗ ಭಾರತದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಪೆನಾಲ್ಟಿ ಕಾರ್ನರ್​ನಲ್ಲಿ ಗೋಲ್​ ದಾಖಲಿಸುವ ಮೂಲಕ ತಂಡವನ್ನು ಸೋಲಿನಿಂದ ಪಾರು ಮಾಡಿದರು.

57 ನಿಮಿಷಗಳ ವರೆಗೂ ಅರ್ಜೆಂಟೀನಾ 1-0 ಅಂತರದಿಂದ ಮುನ್ನಡೆ ಸಾಧಿಸಿತ್ತು. 58ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನಲ್ಲಿ ಹರ್ಮನ್‌ಪ್ರೀತ್ ಗೋಲು ದಾಖಲಿಸಿದರು. ನ್ಯೂಜಿಲೆಂಡ್ ವಿರುದ್ಧದ ಕೊನೆಯ ಪಂದ್ಯದಲ್ಲೂ ಕೊನೆಯ 2 ನಿಮಿಷ ಬಾಕಿ ಇರುವಾಗಲೇ ಗೋಲು ಬಾರಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದರು. ಈ ಬಾರಿಯೂ ತಂಡವನ್ನು ಸೋಲಿನಿಂದ ಪಾರು ಮಾಡಿದರು.

ನ್ಯೂಜಿಲೆಂಡ್ ಮತ್ತು ಅರ್ಜೆಂಟೀನಾ ಹೊರತುಪಡಿಸಿ, ಟೀಮ್ ಇಂಡಿಯಾದ ಗುಂಪಿನಲ್ಲಿ ಆಸ್ಟ್ರೇಲಿಯಾ, ಬೆಲ್ಜಿಯಂ ಮತ್ತು ಐರ್ಲೆಂಡ್​ನಂತಹ ತಂಡಗಳು ಸೇರಿವೆ. ಸದ್ಯ ಭಾರತ 2 ಪಂದ್ಯಗಳ ಬಳಿಕ ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಅರ್ಜೆಂಟೀನಾ ನಾಲ್ಕನೇ ಸ್ಥಾನದಲ್ಲಿದೆ. ಬೆಲ್ಜಿಯಂ ಮೊದಲ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ಮತ್ತು ಐರ್ಲೆಂಡ್ ಕ್ರಮವಾಗಿ ಐದು ಮತ್ತು ಆರನೇ ಸ್ಥಾನದಲ್ಲಿವೆ. ಗುಂಪಿನಲ್ಲಿ ಅಗ್ರ – 4 ತಂಡಗಳು ಕ್ವಾರ್ಟರ್ ಫೈನಲ್‌ಗೆ ತಲುಪಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!