ಪ್ಯಾರಿಸ್​ ಒಲಿಂಪಿಕ್ಸ್ ಸಮಾರೋಪ ಸಮಾರಂಭ: ಭಾರತದ ಧ್ವಜಧಾರಿಗಳಾಗಿ ಶ್ರೀಜೇಶ್, ಮನು ಭಾಕರ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್;

ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಹಾಕಿ ಆಟಗಾರ ಪಿ.ಆರ್ ಶ್ರೀಜೇಶ್ ಮತ್ತು ಅವಳಿ ಕಂಚಿನ ಪದಕ ವಿಜೇತೆ ಶೂಟರ್​ ಮನು ಭಾಕರ್​ ಭಾರತದ ಧ್ವಜಧಾರಿಗಳಾಗಿ ಆಯ್ಕೆಯಾಗಿದ್ದಾರೆ.

ಸಮಾರೋಪ ಸಮಾರಂಭ ಭಾನುವಾರ ರಾತ್ರಿ ನಡೆಯಲಿದೆ.ಮಹಿಳಾ ಧ್ವಜಧಾರಿಯಾಗಿ ಮನು ಭಾಕರ್​ ಅವರನ್ನು ಕಳೆದ ವಾರವೇ ಆಯ್ಕೆ ಮಾಡಲಾಗಿತ್ತು. ಆದರೆ, ಭಾರತದ ಪುರುಷ ಧ್ವಜಧಾರಿ ಕ್ರೀಡಾಳು ಆಯ್ಕೆಯಾಗಿರಲಿಲ್ಲ. ಇದೀಗ ಹಾಕಿಗೆ ವಿದಾಯ ಹೇಳಿರುವ ದಿಗ್ಗಜ ಗೋಲ್​ ಕೀಪರ್​ ಶ್ರೀಜೇಶ್​ ಅವರನ್ನು ಆಯ್ಕೆ ಮಾಡಲಾಗಿದೆ.

ಉಭಯ ಕ್ರೀಡಾಪಟುಗಳು ಧ್ವಜಧಾರಿಯಾಗಿ ಸಮಾರೋಪ ಸಮಾರಂಭದಲ್ಲಿ ತ್ರಿವರ್ಣ ಧ್ವಜವನ್ನು ಹೊತ್ತು ಸಾಗಲಿದ್ದಾರೆ. ಉದ್ಘಾಟನ ಸಮಾರಂಭದಲ್ಲಿ ಪಿ.ವಿ ಸಿಂಧು ಮತ್ತು ಟೆಬಲ್​ ಟೆನಿಸ್​ ಆಟಗಾರ ಶರತ್‌ ಕಮಲ್‌ ಭಾರತದ ಧ್ವಜಧಾರಿಗಳಾಗಿದ್ದರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!