ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿಮಹಿಳಾ ಸಿಂಗಲ್ಸ್ ಆರ್ಚರಿಯಲ್ಲಿ ದೀಪಿಕಾ ಕುಮಾರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಒಲಿಂಪಿಕ್ಸ್ನಲ್ಲಿ 2ನೇ ಬಾರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದರು. ಇಂದು ಸಂಜೆ ನಡೆಯುವ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಕೊರಿಯಾದ ನಾಮ್ ಸು-ಹ್ಯೆನ್ ವಿರುದ್ಧ ಸೆಣಸಾಡಲಿದ್ದಾರೆ.
ಇಂದು(ಶನಿವಾರ) ನಡೆದ ಅತ್ಯಂತ ರೋಚಕ ಪ್ರೀ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜರ್ಮನಿಯ 13 ಶ್ರೇಯಾಂಕದ ಮೈಕಲ್ ಕ್ರೋಪೆನ್ ವಿರುದ್ಧ 6-4 ಅಂತರದಿಂದ ಗೆದ್ದು ಬೀಗಿದರು. ಆದರೆ, ಇದೇ ವಿಭಾಗದ ಮತ್ತೊಂದು ಪ್ರೀ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 18 ವರ್ಷದ ಭಜನ್ ಕೌರ್(Bhajan Kaur) ಇಂಡೋನೇಷ್ಯಾದ ಡಯಾನಂದ ಚೋರುನಿಸಾ ವಿರುದ್ಧ 5-6 ಕೂದಲೆಳೆ ಅಂತರದಲ್ಲಿ ಸೋಲು ಕಂಡರು.