ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಭಾರತದ ನೀರಜ್ ಚೋಪ್ರಾ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಸತತ ಎರಡು ಒಲಿಂಪಿಕ್ಸ್‌ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಭಾರತದ ಮೊದಲ ಅಥ್ಲೀಟ್ ಎಂಬ ದಾಖಲೆ ಬರೆದಿದ್ದಾರೆ
ನೀರಜ್ ಚೋಪ್ರಾ 89.45 ಮೀಟರ್ ದೂರ ಎಸೆದರು ಮತ್ತು ಪಾಕಿಸ್ತಾನದ ಅರ್ಶದ್ ನದೀಂ 92.97 ಮೀಟರ್ ದೂರ ಎಸೆದು ಚಿನ್ನದ ಪದಕ ಪಡೆದರು. ಗ್ರೆಗ್ರೆನೆಡಾದ ಆ್ಯಂಡರ್ಸನ್ ಪೀಟರ್ 88.54 ಮೀಟರ್ ದೂರ ಎಸೆದು ಕಂಚಿನ ಪದಕ ಗೆದ್ದರು.
2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ನೀರಜ್ ಈ ಬಾರಿಯೂ ಚಿನ್ನದ ಪದಕದ ಮೇಲೆ ಕಣ್ಣಿಟ್ಟಿದ್ದರು. ನೀರಜ್ ಅವರು ತಮ್ಮ ಆರು ಅವಕಾಶಗಳಲ್ಲಿ ಐದರಲ್ಲಿ ಫೌಲ್ ಮಾಡಿದರು ಮತ್ತು ಅವರ ಎರಡನೇ ಪ್ರಯತ್ನದಲ್ಲಿ 89.45 ಮೀಟರ್ ಎಸೆದರು.