ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ಯಾರಿಸ್ ಒಲಿಂಪಿಕ್ಸ್(Paris Olympics) ನಲ್ಲಿ ನಾಳೆ(ಗುರುವಾರ ಭಾರತ ಒಟ್ಟು ಮೂರು ಪದಕ ಸ್ಪರ್ಧೆಯಲ್ಲಿ ಕಣಕ್ಕಿಳಿಯಲಿದೆ.
ಒಲಿಂಪಿಕ್ಸ್ ಇತಿಹಾಸದಲ್ಲಿ 3,000 ಮೀ. ಸ್ಟೀಪಲ್‌ಚೇಸ್ ಸ್ಪರ್ಧೆಯಲ್ಲಿ ಫೈನಲ್ ತಲುಪಿದ ಮೊದಲ ಭಾರತೀಯನೆಂಬ ದಾಖಲೆ ಬರೆದಿರುವ ಅಥ್ಲೀಟ್ ಅವಿನಾಶ್ ಮುಕುಂದ್ ಸಾಬ್ಲೆ ಗುರುವಾರ ರಾತ್ರಿ 1.13 ಗಂಟೆಗೆ ನಡೆಯುವ ಫೈನಲ್ ಪಂದ್ಯದಲ್ಲಿ ಐತಿಹಾಸಿಕ ಪದಕ ಗೆಲ್ಲುವ ಇರಾದೆಯೊಂದಿಗೆ ಓಟ ಆರಂಭಿಸಲಿದ್ದಾರೆ.
ಚಿನ್ನದ ನಿರೀಕ್ಷೆಯಲ್ಲಿ ನೀರಜ್
ಟೋಕಿಯೊ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದ, ಭಾರತ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ನಾಳೆ ನಡೆಯುವ ಫೈನಲ್ ಪಂದ್ಯದಲ್ಲಿ ಸ್ಪರ್ಧಿಸಲಿದ್ದಾರೆ. ಈ ಬಾರಿಯೂ ಚಿನ್ನದ ಪದಕ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಜರ್ಮನಿಯ ಜೂಲಿಯನ್ ವೆಬ್ಬರ್, ಪಾಕಿಸ್ತಾನದ ಅರ್ಷದ್ ನದೀಮ್, ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.
ಕಂಚಿನ ಪದಕಕ್ಕೆ ಹಾಕಿ ತಂಡ ಹೋರಾಟ
ಮಂಗಳವಾರ ನಡೆದಿದ್ದ ಪುರುಷರ ಹಾಕಿ ಸೆಮಿಫೈನಲ್ ಪಂದ್ಯದಲ್ಲಿ ಜರ್ಮನಿ ವಿರುದ್ಧ 3-2 ಅಂತರದಿಂದ ಸೋಲುವ ಮೂಲಕ 44 ವರ್ಷಗಳ ಬಳಿಕ ಫೈನಲ್ ಪ್ರವೇಶಿಸುವ ಅವಕಾಶ ಕಳೆದುಕೊಂಡ ಭಾರತ ತಂಡ ನಾಳೆ(ಗುರುವಾರ) ನಡೆಯುವ ಕಂಚಿನ ಪದಕದ ಹೋರಾಟದಲ್ಲಿ ಸ್ಪೇನ್ ವಿರುದ್ಧ ಆಡಲಿದೆ.