Paris Olympics | ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿನಂದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಮನು ಭಾಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಭಿನಂದಿಸಿದ್ದಾರೆ.

ಒಲಿಂಪಿಕ್ ಕ್ರೀಡಾಕೂಟದಲ್ಲಿ ಶೂಟಿಂಗ್ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ 22 ವರ್ಷದ ಮನು ಭಾಕರ್ ಪಾತ್ರರಾಗಿದ್ದಾರೆ.

‘ಇದೊಂದು ಐತಿಹಾಸಿಕ ಪದಕ. ಪ್ಯಾರಿಸ್​ ಒಲಿಂಪಿಕ್ಸ್​​ನಲ್ಲಿ ಭಾರತಕ್ಕಾಗಿ ಮೊದಲ ಪದಕ ಗೆದ್ದಿದ್ದಕ್ಕೆ ಅಭಿನಂದನೆಗಳು. ಕಂಚಿನ ಪದಕಕ್ಕೆ ಶುಭಾಶಯಗಳು. ಈ ಯಶಸ್ಸು ಇನ್ನೂ ವಿಶೇಷವಾಗಿದೆ. ಏಕೆಂದರೆ ಅವರು ಭಾರತಕ್ಕಾಗಿ ಶೂಟಿಂಗ್​​​ನಲ್ಲಿ ಪದಕ ಗೆದ್ದ ಮೊದಲ ಮಹಿಳೆಯಾಗಿದ್ದಾರೆ ಎಂಬುದು ನಂಬಲಾಗದ ಸಾಧನೆ ‘ ಎಂದು ಪಿಎಂ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಭಿನಂದಿಸಿದ್ದು, ಶೂಟಿಂಗ್ ಸ್ಪರ್ಧೆಯಲ್ಲಿ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮನು ಭಾಕರ್ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ. ಅವರ ಸಾಧನೆಯು ಅನೇಕ ಕ್ರೀಡಾಪಟುಗಳಿಗೆ, ವಿಶೇಷವಾಗಿ ಮಹಿಳೆಯರಿಗೆ ಸ್ಫೂರ್ತಿ ನೀಡಲಿದೆ. ಭವಿಷ್ಯದಲ್ಲಿ ಅವರು ಸಾಧನೆಯ ಹೆಚ್ಚಿನ ಎತ್ತರಕ್ಕೆ ಏರಲಿ ಎಂದು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.

ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಕೂಡ ಹರಿಯಾಣದ ಮಗಳಿಂದ ಇಡೀ ದೇಶ ನಿರೀಕ್ಷಿಸುತ್ತಿದ್ದ ಪದಕದ ಭರವಸೆ ಈಡೇರಿದೆ.ದೇಶದ ಹೆಮ್ಮೆಯ ಮಹಿಳಾ ಶೂಟರ್ ಮನು ಭಾಕರ್ ಪ್ಯಾರಿಸ್​ನಲ್ಲಿ ತಮ್ಮ ಶಕ್ತಿ ತೋರಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ 10 ಮೀಟರ್ ಮಹಿಳಾ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮನು ಭಾಕರ್ ದೇಶಕ್ಕೆ ಕಂಚಿನ ಪದಕ ಗೆದ್ದಿದ್ದಾರೆ ಎಂದು ಸೈನಿ ಪೋಸ್ಟ್ ಮಾಡಿದ್ದಾರೆ.

ಮನು ಭಾಕರ್ ಇಡೀ ದೇಶ ಮತ್ತು ಹರಿಯಾಣ ರಾಜ್ಯವು ಹೆಮ್ಮೆಪಡುವಂತಹ ಸಾಧನೆಯನ್ನು ಮಾಡಿದ್ದಾರೆ. ಪ್ರತಿಯೊಬ್ಬ ಹರ್ಯಾಣ ಜನ ಎದೆ ಉಬ್ಬಿಸಿಕೊಂಡು ನಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ಕೇಂದ್ರ ಸಚಿವ ಕಿರಣ್ ರಿಜಿಜು ಕೂಡ ಎಕ್ಸ್ ಗೆ ತೆರಳಿ ಮಹಿಳಾ ಅಥ್ಲೀಟ್ ಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಕೂಡ ಮನು ಭಾಕರ್ ಅವರನ್ನು ಅಭಿನಂದಿಸಿದ್ದಾರೆ ಮತ್ತು “ಭಾರತಕ್ಕೆ ಮೊದಲ ಪದಕ ಪಡೆದ ಮನು ಭಾಕರ್ ಅವರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!