Paris Olympics | ಭಾರತೀಯ ಅಥ್ಲೀಟ್‌ ಗಳನ್ನು ಬೆಂಬಲಿಸಿ: ದೇಶದ ಜನತೆಗೆ ಪ್ರಧಾನಿ ಮೋದಿ ಕರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಭಾಗವಹಿಸುವ ಭಾರತೀಯ ಅಥ್ಲೀಟ್‌ಗಳನ್ನು ಪ್ರೋತ್ಸಾಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೇಶದ ನಾಗರಿಕರಿಗೆ ಕರೆ ನೀಡಿದ್ದಾರೆ.

ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ ಮೂಲಕ ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಅವರು , ಪ್ಯಾರಿಸ್ ಒಲಿಂಪಿಕ್ಸ್ ಇಡೀ ಜಗತ್ತನ್ನು ಹಿಡಿದಿಟ್ಟುಕೊಂಡಿದೆ. ಕ್ರೀಡಾಕೂಟವು ನಮ್ಮ ಕ್ರೀಡಾಪಟುಗಳಿಗೆ ರಾಷ್ಟ್ರವನ್ನು ಹೆಮ್ಮೆಪಡಿಸಲು ಮತ್ತು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಮ್ಮ ತ್ರಿವರ್ಣ ಧ್ವಜವನ್ನು ಬೀಸುವ ಅವಕಾಶವನ್ನು ಒದಗಿಸುತ್ತದೆ. ಅವರನ್ನು ಹುರಿದುಂಬಿಸಲು ನಾನು ನಿಮ್ಮಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ 100 ಕ್ಕೂ ಹೆಚ್ಚು ದೇಶಗಳ ಯುವಕರು ಭಾಗವಹಿಸಿದ್ದು, ನಮ್ಮ ತಂಡವು ಒಟ್ಟಾರೆಯಾಗಿ ಅಗ್ರ ಐದರಲ್ಲಿ ಯಶಸ್ವಿಯಾಗಿ ಸ್ಥಾನ ಪಡೆದಿದೆ.ಪುಣೆಯ ಆದಿತ್ಯ ವೆಂಕಟ್ ಗಣೇಶ್, ಪುಣೆಯ ಸಿದ್ಧಾರ್ಥ್ ಚೋಪ್ರಾ, ದೆಹಲಿಯ ಅರ್ಜುನ್ ಗುಪ್ತಾ, ಗ್ರೇಟರ್ ನೋಯ್ಡಾದ ಕನವ್ ತಲ್ವಾರ್, ಮುಂಬೈನ ರುಶಿಲ್ ಮಾಥುರ್ ಮತ್ತು ಗುವಾಹಟಿಯ ಆನಂದೋ ಭಾದುರಿ ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!