Paris Olympics | ನಿಲ್ಲದ ವಿನೇಶ್ ಫೋಗಟ್ ಗೆಲುವಿನ ಓಟ: ಸೆಮಿ ಫೈನಲ್​ಗೂ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ಯಾರಿಸ್​ ಒಲಿಂಪಿಕ್ಸ್​ನ ಮಹಿಳೆಯರ 50 ಕೆಜಿ ಕುಸ್ತಿ ವಿಭಾಗದಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಸೆಮಿಫೈನಲ್​ ಪ್ರವೇಶಿಸಿಸಿದ್ದಾರೆ. ಈ ಮೂಲಕ ಪದಕ ಭರವಸೆಯೊಂದನ್ನು ಮೂಡಿಸಿದ್ದಾರೆ.

ಮಂಗಳವಾರ ನಡೆದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಉಕ್ರೇನ್​ನ ಒಕ್ಸಾನಾ ಲಿವಾಚ್ ವಿರುದ್ಧ 7-5 ಅಂತರದ ರೋಚಕ ಗೆಲುವು ಸಾಧಿಸಿ ಸೆಮಿ ಫೈನಲ್​ ಪ್ರವೇಶಿಸಿದರು. ಇದಕ್ಕೂ ಮುನ್ನ ನಡೆದಿದ್ದ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್ ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ಜಪಾನ್‌ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದರು.

ಇದೀಗ ಸೆಮಿ ಹಂತಕ್ಕೇರಿರುವ ಅವರು ಪದಕವೊಂದನ್ನು ಖಾತ್ರಿ ಪಡಿಸಿದ್ದಾರೆ.ಪ್ಯಾರಿರ್ಸ್​ ಒಲಿಂಪಿಕ್ಸ್​ ಆರಂಭಕ್ಕೇ ಕೆಲವೇ ದಿನ ಬಾಕಿ ಇರುವಾಗ ಮ್ಯಾಡ್ರಿಡ್​ನಲ್ಲಿ ನಡೆದಿದ್ದ ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್(Grand Prix) ಕುಸ್ತಿ ಟೂರ್ನಿಯಲ್ಲಿ ಚಿನ್ನದ ಪದಕ ಗೆದ್ದು ಬೀಗಿದ್ದರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!