Paris Paralympics | ಭಾರತಕ್ಕೆ ಮತ್ತೊಂದು ಪದಕ: 100 ಮೀ. ಓಟದಲ್ಲಿ ಕಂಚು ಗೆದ್ದು ಇತಿಹಾಸ ಬರೆದ ಪ್ರೀತಿ ಪಾಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನ ಭಾರತಕ್ಕೆ ಒಂದರ ಹಿಂದೆ ಒಂದರಂತೆ ಶುಭ ಸುದ್ದಿಗಳು ಸಿಗುತ್ತಿವೆ. ಒಂದೇ ದಿನ ಭಾರತಕ್ಕೆ ಮೂರನೇ ಪದಕ ಸಿಕ್ಕಿದೆ.

100 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾರತದ ಪ್ರೀತಿ ಪಾಲ್ ಕಂಚಿನ ಪದಕ ಗೆದ್ದಿದ್ದಾರೆ. ಮಹಿಳೆಯರ 100 ಮೀಟರ್ ಟಿ-35 ಫೈನಲ್‌ನಲ್ಲಿ ಮೂರನೇ ಸ್ಥಾನ ಪಡೆಯುವ ಮೂಲಕ ಪ್ರೀತಿ ಕಂಚಿನ ಪದಕವನ್ನು ತನ್ನದಾಗಿಸಿಕೊಂಡರು. ಇದರೊಂದಿಗೆ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಟ್ರ್ಯಾಕ್ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇವರಿಗೂ ಮೊದಲು ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್‌ಎಚ್ 1 ಫೈನಲ್ ಸ್ಪರ್ಧೆಯಲ್ಲಿ ಅವನಿ ಲೆಖರಾ ಚಿನ್ನದ ಪದಕ ಗೆದ್ದಿದ್ದರೆ, ಮೋನಾ ಅಗರ್ವಾಲ್ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!