ಪರಿಷತ್‌ ಉಪಚುನಾವಣೆ: ಕಾಂಗ್ರೆಸ್ ನಿಂದ ರಾಜು ಪೂಜಾರಿಗೆ ಟಿಕೆಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

ರಾಜು ಪೂಜಾರಿ ಬೈಂದೂರು ಅವರಿಗೆ ಟಿಕೆಟ್ ನೀಡಿ ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ.

ಈಗಾಗಲೇ ಬಿಜೆಪಿ ಸಹ ತನ್ನ ಅಭ್ಯರ್ಥಿಯನ್ನು ಕಿಶೋರ್ ಕುಮಾರ್ ಪುತ್ತೂರ್​ಗೆ ಟಿಕೆಟ್ ನೀಡಲಾಗಿದ್ದು, ಇದೇ ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸ್ಥಾನದ ಉಪಚುನಾವಣೆ ಅ.21 ರಂದು ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!