ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನ ಪರಿಷತ್ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ.
ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ ಅಕ್ಟೋಬರ್ 21ರಂದು ನಡೆಯಲಿದೆ.
ಸೆಪ್ಟೆಂಬರ್ 26ರಿಂದ ಅಧಿಸೂಚನೆ ಜಾರಿಯಾಗಲಿದೆ. ಅಕ್ಟೋಬರ್ 3ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಅಕ್ಟೋಬರ್ 4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಅಕ್ಟೋಬರ್ 21ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ.