ಪರಿಷತ್ ಉಪ ಚುನಾವಣೆ: ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಾಜಿ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಈ ಸ್ಥಾನಕ್ಕೆ ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್ ಘೋಷಣೆ ಮಾಡಿದೆ.

ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಲಾಗಿತ್ತು. ಇದೀಗ ಈ ಸ್ಥಾನಕ್ಕೆ ಬಿಜೆಪಿಯಿಂದ ಟಿಕೆಟ್ ಫೈನಲ್ ಮಾಡಿದೆ. ಕೋಲಿ ಸಮುದಾಯದ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್ ನೀಡಿದೆ.

ಕೇಂದ್ರ ಚುನಾವಣಾ ಆಯೋಗದಿಂದ ವಿಧಾನಪರಿಷತ್ ಉಪ ಚುನಾವಣೆಗೆ ಅಧಿಸೂಚನೆ ಹೊರಡಿಸಿತ್ತು. ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಅವರು ಮಾರ್ಚ್ 31, 2022ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿರುವಂತ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಜುಲೈ. 25ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ದಿನಾಂಕ 01-08-2022 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ನಾಮಪತ್ರಗಳ ಪರಿಶೀಲನೆ ದಿನಾಂಕ 02-08-2022ರಂದು ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನ ದಿನಾಂಕ 04-08-2022 ಆಗಿದೆ. ದಿನಾಂಕ 11-08-2022ರಂದು ಮತದಾನ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಈ ಬಳಿಕ ಸಂಜೆ 5 ಗಂಟೆಗೆ ಮತಏಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!