ಪರಿಷತ್ ಉಪ ಚುನಾವಣೆ: ಬಿಜೆಪಿಯಿಂದ ಕಿಶೋರ್ ಕುಮಾರ್ ಪುತ್ತೂರ್ ಗೆ ಟಿಕೆಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರ್ ಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ.

ಕೋಟಾ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಕೋಟ ಶ್ರೀನಿವಾಸ ಪೂಜಾರಿಯವರು ಸಂಸದರಾಗಿ ಆಯ್ಕೆಯಾದ ನಂತ್ರ ಅವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದೀಗ ಸವಿತಾ ಸಮಾಜದ ಮುಖಂಡರಾಗಿರುವ ಕಿಶೋರ್ ಕುಮಾರ್ ಪುತ್ತೂರ್ ಅವರಿಗೆ ವಿಧಾನ ಪರಿಷತ್ ಉಪ ಚುನಾವಣೆಗೆ ಟಿಕೆಟ್ ನೀಡಲಾಗಿದೆ.

ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪ ಚುನಾವಣೆಗಾಗಿ ಸೆ.26ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಕ್ಟೋಬರ್.3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್.4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್.7 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನಾಂಕವಾಗಿದೆ.

ಇನ್ನೂ ಅಕ್ಟೋಬರ್.21ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಈ ಬಳಿಕ ಅಕ್ಟೋಬರ್.24ರಂದು ಮತಏಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!