October 11, 2026
Sunday, October 11, 2026
spot_img

ಪರಿಷತ್‌ ಚುನಾವಣೆ: ವಂಡರ್‌ಲಾ ರೆಸಾರ್ಟ್‌ನಲ್ಲಿ ಇಂದು ಸಿಎಲ್‌ಪಿ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯಸಭಾ ಚುನಾವಣೆ ಹಾಗೂ ವಿಧಾನಪರಿಷತ್‌ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ಇಂದು ಬೆಂಗಳೂರಿನ ಬಿಡದಿಯ ವಂಡರ್‌ಲಾ ರೆಸಾರ್ಟ್‌ನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ.

ರೆಸಾರ್ಟ್‌ನಲ್ಲೇ ವಾಸ್ತವ್ಯ ಹೂಡಲಿರುವ ಕಾಂಗ್ರೆಸ್ ಶಾಸಕರು, ಜೂ.18ರಂದು ರೆಸಾರ್ಟ್‌ನಿಂದಲೇ ನೇರವಾಗಿ ವಿಧಾನಸೌದಕ್ಕೆ ತೆರಳಿ ಮತದಾನ ಮಾಡಲಿದ್ದಾರೆ. ಇಂದು ಸಂಜೆ 6:15ಕ್ಕೆ ಬಿಡದಿಯ ಬಿಡದಿಯಲ್ಲಿರುವ ವಂಡರ್‌ಲಾ ರೆಸಾರ್ಟ್‌ನಲ್ಲಿಯೇ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ನಂತರ ಶಾಸಕರು ರೆಸಾರ್ಟ್‌ನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್ ಸೇರಿ ಕಾಂಗ್ರೆಸ್‌ನ ಎಲ್ಲಾ ಸಚಿವರು, ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ. ಸಂಜೆ 5 ಗಂಟೆಗೆ ರೆಸಾರ್ಟ್‌ಗೆ ಕಾಂಗ್ರೆಸ್ ಶಾಸಕರು ಆಗಮಿಸಲಿದ್ದಾರೆ.

Must Read