ನಾಳೆಯಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ: ಇಂದು ಸರ್ವಪಕ್ಷ ಸಭೆಗೆ ಕೇಂದ್ರ ಸರ್ಕಾರ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಸತ್ತಿನ ಬಜೆಟ್ ಅಧಿವೇಶನವು ನಾಳೆಯಿಂದ ಪ್ರಾರಂಭವಾಗಲಿದ್ದು, ಅಧಿವೇಶನದ ಸುಗಮ ಕಾರ್ಯನಿರ್ವಹಣೆಗೆ ಸಹಕಾರ ಕೋರಿ ಇಂದು ಸರ್ವಪಕ್ಷ ಸಭೆಗೆ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರಿಗೆ ಕೇಂದ್ರ ಸರ್ಕಾರ ಕರೆ ನೀಡಿದೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮುಂಬರುವ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ರಚನಾತ್ಮಕ ಮಾತುಕತೆ ನಡೆಸುವಂತೆ ವಿರೋಧ ಪಕ್ಷದ ನಾಯಕರಿಗೆ ಮನವಿ ಮಾಡಿದರು.

ನಾಳೆ ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನುದ್ದೇಶಿಸಿ ದೌಪದಿ ಮುರ್ಮು ಅವರ ಭಾಷಣದೊಂದಿಗೆ ಅಧಿವೇಶನ ಪ್ರಾರಂಭವಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!