ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಸಂಸತ್ ಭವನದ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಿಯಾಲ ಹೌಸ್ ಕೋರ್ಟ್‌ಗೆ ದೆಹಲಿ ಪೊಲೀಸರ ವಿಶೇಷ ತಂಡವು 1,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.
2023 ರ ಡಿಸೆಂಬರ್ 13 ರಂದು ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ತನಿಖೆಯಲ್ಲಿ ದೆಹಲಿ ಪೊಲೀಸರ ವಿಶೇಷ ತಂಡವು ಶುಕ್ರವಾರ ತನ್ನ ಮೊದಲ ಚಾರ್ಜ್‌ಶೀಟ್ (Charge Sheet) ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
ಯುಎಪಿಎ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. ಆರೋಪಿಗಳಾದ ಡಿ.ಮನರಂಜನ್, ಲಲಿತಾ ಝಾ, ಅಮೋಲ್ ಶಿಂಧೆ, ಮಹೇಶ್ ಕುಮವತ್, ಸಾಗರ್ ಶರ್ಮಾ, ನೀಲಂ ಅಜಾದ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಆಗಿದೆ. ಸದ್ಯ ಎಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ದೀಪ್ ಕೌರ್ ಅವರು ಪ್ರಕರಣದ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.