ನಿಗದಿಗಿಂತ ನಾಲ್ಕು ದಿನ ಮುಂಚಿತವಾಗಿ ಸಂಸತ್ ಮುಂಗಾರು ಅಧಿವೇಶನಕ್ಕೆ ತೆರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಸಂಸತ್ ಮುಂಗಾರು ಅಧಿವೇಶನಕ್ಕೆ ಈ ಬಾರಿ‌ ನಿಗದಿತ ಅವಧಿಗಿಂತ ನಾಲ್ಕು ದಿನ ಮುಂಚಿತವಾಗಿ ಸೋಮವಾರ ತೆರೆಬಿದ್ದಿದೆ.

ಒಟ್ಟು 16 ದಿನಗಳ ಕಾಲ ನಡೆದ ಸಂಸತ್ ಅಧಿವೇಶನದಲ್ಲಿ ಏಳು ವಿಧೇಯಕಗಳನ್ನು ಅಂಗೀಕರಿಸಲಾಗಿದೆ.
ರಾಜ್ಯಸಭಾ ಸಭಾಪತಿ ಎಂ ವೆಂಕಯ್ಯ ನಾಯ್ಡು ಅವರು, ಅಧಿವೇಶನಕ್ಕೆ ಸಂಬಂಧಿಸಿದ ವಿವರವಾದ ಅಂಕಿ ಅಂಶಗಳನ್ನು ರಾಜ್ಯಸಭೆಯ ಸೆಕ್ರೆಟರಿಯೇಟ್ ಕೋರ್ಸ್ ಸಮಯದಲ್ಲಿ ನೀಡಲಾಗುವುದು ಎಂದು ಹೇಳಿ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.
ಈ ಬಾರಿ ಜು. 18 ರಿಂದ ಆ. 12 ರವರೆಗೆ ಅಧಿವೇಶನ ನಡೆಸಲು ನಿರ್ಧರಿಸಲಾಗಿತ್ತು.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸದನವನ್ನು ಇಂದು ಅನಿರ್ದಿಷ್ಟಾವಧಿಗೆ ಮುಂದೂಡುವ ಮೂಲಕ ಆ. 8 ರಂದೇ ಸಂಸತ್ ಮುಂಗಾರು ಅಧಿವೇಶನಕ್ಕೆ ತೆರೆ ಎಳೆಯಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!