September 28, 2026
Monday, September 28, 2026
spot_img

ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಸಂಸತ್ ಆವರಣ: ಪ್ರಧಾನಿ ಮೋದಿ-ರಾಹುಲ್ ಗಾಂಧಿ ಆತ್ಮೀಯ ಮಾತುಕತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಸಂಸತ್ ಭವನದ ಆವರಣ ಇಂದು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪರಸ್ಪರ ಕುಶಲೋಪರಿ ಮಾತುಕತೆ ನಡೆಸಿದ್ದಾರೆ.

ಸಮಾಜ ಸುಧಾರಕ ಜ್ಯೋತಿಬಾ ಫುಲೆ ಅವರ 200ನೇ ಜನ್ಮ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಇಂದು ಇಬ್ಬರು ನಾಯಕರು ಆತ್ಮೀಯವಾಗಿ ಮಾತುಕತೆ ನಡೆಸಿದ್ದು, ಎಲ್ಲೆಡೆ ವಿಡಿಯೋ ವೈರಲ್ ಆಗಿದೆ.

ರಾಜಕೀಯವಾಗಿ ಭಿನ್ನಾಭಿಪ್ರಾಯಗಳಿದ್ದರೂ ಇಬ್ಬರು ನಾಯಕರು ಪರಸ್ಪರ ಸೌಹಾರ್ದಯುತ ಸಂವಾದ ನಡೆಸಿದರು. ಇವರಿಬ್ಬರ ನಡುವಿನ ಮಾತುಕತೆ ಅತೀ ಕಡಿಮೆ ಅವಧಿಯದ್ದಾಗಿದ್ದರೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಆರೋಪ ಪತ್ಯಾರೋಪಗಳ ನಡುವೆ ಈ ಭೇಟಿ ಸಾಕಷ್ಟು ಗಮನ ಸೆಳೆಯುತ್ತಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Must Read