ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ನಲ್ಲಿ ಆಗಿರುವ ಭದ್ರತಾ ವೈಫಲ್ಯ ಕುರಿತಾಗಿ ಹೇಳಿಕೆ ನೀಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನೀತಿಯಿಂದಾಗಿ ಉಂಟಾಗಿರುವ ನಿರುದ್ಯೋಗ ಸಮಸ್ಯೆಯೇ ಕಾರಣ ಎಂದು ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ದೇಶದ ನಾಗರಿಕರು ಎದುರಿಸುತ್ತಿರುವ ಅತ್ಯಂತ ದೊಡ್ಡ ಸಮಸ್ಯೆ ನಿರುದ್ಯೋಗ ಹಾಗೂ ಹಣದುಬ್ಬರ ಎಂದ ಅವರು, ಮೋದಿಯವರ ನೀತಿಯಿಂದಾಗಿ ದೇಶದ ನಾಗರಿಕರಿಗೆ ಉದ್ಯೋಗ ದೊರೆಯುತ್ತಿಲ್ಲ. ನಿರುದ್ಯೋಗದ ಕಾರಣದಿಂದಾಗಿಯೇ ಈ ಭದ್ರತಾ ವೈಫಲ್ಯ ಉಂಟಾಗಿದೆ ಎಂದು ಆರೋಪಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ