ಸಂಸತ್ ಭದ್ರತಾ ಲೋಪ: ಆರೋಪಿ ಮನೋರಂಜನ್ ಕೊಠಡಿ ಸೀಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಸತ್ ಭದ್ರತಾ ಲೋಪ ಪ್ರಕರಣ ಸಂಬಂಧ ಬಂಧಿತನಾಗಿರುವ ಮೈಸೂರಿನ ಮನೋರಂಜನ್ ಕೊಠಡಿಯನ್ನು ಪೊಲೀಸರು ಸೀಜ್ ಮಾಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಮೈಸೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಡುವೆ, ವಿಜಯನಗರದ 2ನೇ ಹಂತದಲ್ಲಿರುವ ಆರೋಪಿಯ ರೂಂಗೆ ಪೊಲೀಸರು ಬೀಗ ಹಾಕಿದ್ದಾರೆ.

ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಮನೋರಂಜನ್ ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಆತನ ಬ್ಯಾಂಕಿಂಗ್ ವ್ಯವಹಾರದ ಕುರಿತು ಸಹ ಮಾಹಿತಿ ಕಲೆ ಹಾಕಲಾಗುತ್ತಿದೆ.

ಆತ ಯಾವುದೇ ಖರ್ಚು ಮಾಡುತ್ತಿರಲಿಲ್ಲ. ಕೆಲಸವನ್ನೂ ಮಾಡುತ್ತಿರಲಿಲ್ಲ. ಆದರೂ ಬೆಂಗಳೂರು, ದೆಹಲಿಗೆ ಓಡಾಡುತ್ತಿದ್ದ ಎಂದು ಮನೋರಂಜನ್ ತಂದೆ ದೇವರಾಜೇಗೌಡ ತಿಳಿಸಿದ್ದಾರೆ.

ಈ ರೀತಿ ಓಡಾಟಕ್ಕೆ ಹಣ ಎಲ್ಲಿಂದ ಬರುತ್ತಿತ್ತು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಉತ್ತರಪ್ರದೇಶದ ಸಾಗರ್ ಶರ್ಮ ಮೈಸೂರಿಗೆ ಬಂದು ಹೋಗಿರುವುದು ಖಚಿತವಾಗಿದೆ. ಈ ಬಗ್ಗೆ ಮಾಹಿತಿ ಕೂಡ ಪೊಲೀಸರು ಕಲೆ ಹಾಕುತ್ತಿದ್ದಾರೆ.

ನಗರದ ಜಲದರ್ಶಿನಿ ಅತಿಥಿಗೃಹದ ಆವರಣದಲ್ಲಿರುವ ಸಂಸದ ಪ್ರತಾಪ್ ಸಿಂಹ ಕಚೇರಿ ಬಳಿಯೂ ಪರಿಶೀಲನೆ ನಡೆಸಲಾಗಿದೆ. ಪೊಲೀಸರು ತಂಡ ಸಂಸದರ ಕಚೇರಿಗೆ ಬಂದು ಹೋಗಿರುವವರ ಮಾಹಿತಿ ಸಂಗ್ರಹಿಸಿದೆ. ಹೀಗಾಗಿ ಈ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!