ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನದ ದ್ವಿತೀಯಾರ್ಧ ಆರಂಭವಾಗಲಿದ್ದು, ಈ ವೇಳೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯವನ್ನು ಲೋಕಸಭೆಯಲ್ಲಿ ಮಂಡಿಸಲಿದೆ.
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರ ಸದಸ್ಯರಿಗೆ ಮಾತನಾಡಲು ಅವಕಾಶ ನೀಡದಿರುವುದು ಮತ್ತು ಎಂಟು ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವುದನ್ನು ಪ್ರತಿಪಕ್ಷಗಳು ಪ್ರಶ್ನಿಸಿವೆ. ಸ್ಪೀಕರ್ ಅವರು ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಾಗಿ ನಾಳೆಯಿಂದ ಸಂಸತ್ ನಲ್ಲಿ ಚರ್ಚೆ, ಗದ್ದಲ ಇರಲಿದೆ.
ಇದರ ಜೊತೆಗೆ ಮದ್ಯಪ್ರಾಚ್ಯದಲ್ಲಿನ ಯುದ್ಧ, ರಷ್ಯಾದ ತೈಲ ಖರೀದಿಯ ಬಗ್ಗೆ ಅಮೆರಿಕದ ಮಧ್ಯಪ್ರವೇಶ ಸೇರಿದಂತೆ ಇತರ ವಿಷಯಗಳ ಬಗ್ಗೆ ವಿಪಕ್ಷಗಳು ಚರ್ಚೆಗೆ ಎಳೆಯುವ ಸಾಧ್ಯತೆಯಿದೆ.



