ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿ: ಸರ್ವಪಕ್ಷ ಸಭೆ ಕರೆದ ಪ್ರಲ್ಹಾದ್ ಜೋಶಿ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಡಿಸೆಂಬರ್ 4 ರಿಂದ ಡಿಸೆಂಬರ್ 22 ರವರೆಗೆ ಅಧವೇಶನಗಳು ನಡೆಯಲಿವೆ. ಇದಕ್ಕೂ ಮುನ್ನ ಅಧಿವೇಶನಕ್ಕೆ ಸಂಬಂಧಿಸಿದಂತೆ, ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಡಿಸೆಂಬರ್ 2 ರಂದು ಬೆಳಿಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ.

ಸಾಮಾನ್ಯವಾಗಿ ಅಧಿವೇಶನ ಆರಂಭಕ್ಕೆ ಒಂದು ದಿನ ಮೊದಲು ಸರ್ವಪಕ್ಷ ಸಭೆ ಕರೆಯುತ್ತಾರೆ. ಆದರೆ, ಈ ಬಾರಿ ಡಿಸೆಂಬರ್ 3ರಂದು ಚುನಾವಣೆ ನಡೆಯುತ್ತಿರುವ ಐದು ರಾಜ್ಯಗಳ ಮತ ಎಣಿಕೆಯಿಂದಾಗಿ, ಸರ್ಕಾರ 2ರಂದು ಸಭೆ ಸರ್ವಪಕ್ಷಗಳ ಸಭೆ ಕರೆದಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 3 ರಂದು ಹೊರಬೀಳಲಿದೆ. ಈ ಫಲಿತಾಂಶಗಳು ಸಂಸತ್ತಿನಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ.

ಈ ಅಧಿವೇಶನದಲ್ಲಿ ಹಲವಾರು ಪ್ರಮುಖ ಮಸೂದೆಗಳನ್ನು ಅಂಗೀಕರಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತದೆ. ಇಷ್ಟೇ ಅಲ್ಲ.. ಮಹುವಾ ಮೊಯಿತ್ರಾ ಕುರಿತ ನೈತಿಕ ಸಮಿತಿಯ ವರದಿಯನ್ನೂ ಈ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ. ಗೃಹ ಸ್ಥಾಯಿ ಸಮಿತಿಯು ಇತ್ತೀಚೆಗೆ ಮೂರು ವರದಿಗಳನ್ನು ಅಂಗೀಕರಿಸಿರುವುದರಿಂದ ಐಪಿಸಿ, ಸಿಆರ್‌ಪಿಸಿ ಮತ್ತು ಎವಿಡೆನ್ಸ್ ಆಕ್ಟ್ ಬದಲಿಸಲು ಬಯಸುವ ಮೂರು ಪ್ರಮುಖ ಮಸೂದೆಗಳನ್ನು ಅಧಿವೇಶನದಲ್ಲಿ ಪರಿಗಣನೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!