follow up | ಸಂಸತ್ ಭವನ ಸ್ಮೋಕ್ ಅಟ್ಯಾಕ್: ಎಂಟು ಲೋಕಸಭಾ ಸಿಬ್ಬಂದಿ ಅಮನತು?

ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ ಭವನ ಸ್ಮೋಕ್ ಅಟ್ಯಾಕ್ ಪ್ರಕರಣದಲ್ಲಿ ನಡೆದಿರುವ ಭದ್ರತಾ ಲೋಪದ ಹಿನ್ನೆಲೆಯಲ್ಲಿ ಎಂಟು ಲೋಕಸಭಾ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಕಲಾಪ ನಡೆಯುತ್ತಿದ್ದ ವೇಳೆ ಪಾಸ್ ಪಡೆದು ಬಂದಿದ್ದ ಇಬ್ಬರು ದುಷ್ಕರ್ಮಿಗಳು ಹಠಾತ್ತನೆ ಸಂದರ್ಶಕರ ಗ್ಯಾಲರಿಯಿಂದ ಹಾರಿ ಸ್ಮೋಕ್ ಬಾಂಬ್ ಸಿಡಿಸಿದ್ದರು. ಇದೇ ವೇಳೆ ಮತ್ತಿಬ್ಬರು ಸಂಸತ್ತಿನ ಹೊರಗೆ ಸ್ಮೋಕ್ ಬಾಂಬ್ ಸಿಡಿಸಿದ್ದರು. ಈ ಘಟನೆಯಲ್ಲಿ ಒಟ್ಟು ಆರು ಮಂದಿ ಭಾಗಿಯಾಗಿದ್ದು, ಐವರನ್ನು ಪೊಲೀಸರು ಈಗಾಗಲೇ ಬಂಧಿಸಿ ತೀವ್ರ ತನಿಖೆ ನಡೆಸುತ್ತಿದ್ದಾರೆ. ತಲೆಮರೆಸಿಕೊಂಡ ಇನ್ನೋರ್ವ ಆರೋಪಿಗಾಗಿ ತೀವ್ರ ಶೋಧ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!