ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಯಲ್ಲಿ ಜೈಲಿನಿಂದಲೇ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತ್ ಪಾಲ್ ಸಿಂಗ್ ಗೆ ನಾಲ್ಕು ದಿನಗಳ ಪೆರೋಲ್ ಸಿಕ್ಕಿದೆ.
ಜು.5ರಂದು ಅಸ್ಸಾಂನ ದಿಬ್ರುಗರ್ ಜೈಲಿನಿಂದ ಹೊರಬರಲಿದ್ದಾರೆ.
ಇನ್ನು ಜೈಲಿನಿಂದಲೇ ಸ್ಪರ್ಧಿಸಿ ಗೆಲುವು ಸಾಧಿಸಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಪ್ರಮಾಣವಚನ ಸ್ವೀಕರಿಸಿಲ್ಲ. ಹೀಗಾಗಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ಕಲ್ಪಿಸಬೇಕೆಂದು ಕೋರಿ ಅಮೃತ್‌ಪಾಲ್ ಸಿಂಗ್ ಕೋರ್ಟ್ ಮೊರೆ ಹೋಗಿದ್ದರು. ಅವರ ಮನವಿಯನ್ನು ಪುರಸ್ಕರಿಸಿರುವ ಕೋರ್ಟ್, ನಾಲ್ಕು ದಿನಗಳ ಪೆರೋಲ್ ಮೇಲೆ ಆತನನ್ನು ಬಿಡುಗಡೆ ಮಾಡಿದೆ.
ಜು.5ರಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆ ಇದೆ.