ಹೊಸದಿಗಂತ ಡಿಜಿಟಲ್ ಡೆಸ್ಕ್ :
ಇಟಲಿ ಪ್ರವಾಸದಲ್ಲಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಲ್ಲಿನ ರೋಮ್ ನಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ಸಿರಿಧಾನ್ಯಗಳ ಪ್ರದರ್ಶನ- 2023 ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು.
ಅಂತರಾಷ್ಟ್ರೀಯ ಆಹಾರ ಮತ್ತು ಕೃಷಿ ಸಂಸ್ಥೆ ( FAO) ಯ ಡೈರೆಕ್ಟರ್ ಜನರಲ್ ಕ್ಯೂ ಡೊಂಗ್ಯು ಸಹಿತ ಇತರ ಗಣ್ಯರು ಈ ಸಮಾರಂಭದಲ್ಲಿ ಭಾಗವಹಿಸಿದರು. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನೀಡಿರುವ ಪ್ರಸ್ತಾವನೆಯಂತೆ, 2023ನೇ ವರ್ಷವನ್ನು ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಎಂದು ವಿಶ್ವಸಂಸ್ಥೆ ಘೋಷಿಸಿದೆ.